ಬೆಂಗಳೂರು: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ.
ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ. ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಹಿಂದೆ ಬಿಎಸ್ ವೈ ಅವರನ್ನು ಬಂಧನ ಮಾಡದಂತೆ ಆದೇಶ ಹೊರಡಿಸಿತ್ತು.
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
Advertisement