
ಬೆಳಗಾವಿ: ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ಅಪಹರಣ ಮಾಡಿರುವ ಆರೋಪ ಕೇಳಿ ಬಂದಿದೆ.
ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯ್ಲಿ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅವರನ್ನು ಅಪಹರಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪಟ್ಟಣದ ಚೌಕಿಮಠದ ಬಳಿ ಸದಸ್ಯ ನಾಗರಾಜ ನಿಂತಿದ್ದಾಗ ಸ್ಕಾರ್ಪಿಯೋ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಅಪಹರಣ ಮಾಡಿದ್ದಾರೆ ಅವರ ತಂದೆ ಬಸವರಾಜ್ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ.
ದೂರು ದಾಖಲಾದ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಸೆಪ್ಟರೆಂಬರ್ 3 ರಂದು ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆ ಇದ್ದು, ಬಿಜೆಪಿ 9, ಕಾಂಗ್ರೆಸ್ ಹಾಗೂ ಪಕ್ಷೇತರ ಸೇರಿ 9 ಸದಸ್ಯರ ಸಂಖ್ಯಾಬಲ ಇದೆ. ಹೀಗಾಗಿ ಸಂಖ್ಯಾಬಲ ಹೆಚ್ಚಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಪಕ್ಷದವರೇ ಕಿಡ್ನಾಪ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಅಪಹರಣಕ್ಕೆ ಒಳಗಾದ ವ್ಯಕ್ತಿಯ ಪತ್ತೆಗೆ ಮೂರು ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.
Advertisement