ಬೆಂಗಳೂರು: ಮಾನ್ಯತಾ ಟೆಕ್‌ಪಾರ್ಕ್‌ ಬಳಿಯ ಖಾಸಗಿ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ

ಕಳೆದ ವರ್ಷ ಡಿಸೆಂಬರ್ 1 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ 68 ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಾಗವಾರದ ಮಾನ್ಯತಾ ಟೆಕ್‌ಪಾರ್ಕ್‌ ಬಳಿಯ ಖಾಸಗಿ ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆಯ ಇ–ಮೇಲ್‌ ಬಂದಿದ್ದು, ಇದರಿಂದ ಶಾಲೆಯಲಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ ಮೇಲೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ತಿಳಿದುಬಂದಿತ್ತು. ಬಳಿಕಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟರು.

ಶಾಲಾ ಆಡಳಿತಾಧಿಕಾರಿ ಪದ್ಮಿನಿ ರಾಘವೇಂದ್ರ ಅವರು ನಿತ್ಯದಂತೆಯೇ ಗುರುವಾರ ಬೆಳಿಗ್ಗೆಯೂ ಶಾಲೆಗೆ ಬಂದಿದ್ದು, ಇ–ಮೇಲ್‌ ಪರಿಶೀಲಿಸುತ್ತಿದ್ದ ವೇಳೆ askblrnorth@tipsglobal.net ನಿಂದ ಬಾಂಬ್‌ ಬೆದರಿಕೆ ಇ–ಮೇಲ್‌ ಬಂದಿರುವುದು ತಿಳಿದುಬಂದಿದೆ.

ಶಾಲೆಯ ಸುತ್ತಲೂ ಐದು ಬಾಂಬ್‌ಗಳನ್ನು ಇಡಲಾಗಿದೆ. ಮಧ್ಯಾಹ್ನ 1.30ರ ಸುಮಾರಿಗೆ ಎಲ್ಲ ಬಾಂಬ್‌ಗಳು ಸ್ಫೋಟವಾಗಲಿವೆ ಎಂದು ಬರೆದಿರುವುದು ಕಂಡುಬಂದಿದೆ. ಇದನ್ನು ಓದಿ ಗಾಬರಿಗೊಂಡ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಗ್ರಹ ಚಿತ್ರ
ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ

ಬಳಿಕ ಗೋವಿಂದಪುರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಶಾಲೆಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಈ ಸಂಬಂಧ ಗೋವಿಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ನಗರದ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿತ್ತು.

ಕಳೆದ ವರ್ಷ ಡಿಸೆಂಬರ್ 1 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ 68 ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com