ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ಪವಿತ್ರಾ ಗೌಡ (ಸಂಗ್ರಹ ಚಿತ್ರ)
ಪವಿತ್ರಾ ಗೌಡ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಪವಿತ್ರಾ ಗೌಡ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸೆಬಾಸ್ಟಿಯನ್, ಪವಿತ್ರಾಗೌಡಗೂ ದರ್ಶನ್​ಗೆ ಒಂದು ರೀತಿಯ ಸಂಬಂಧ ಇರಬಹುದು. ಆದರೆ ರೇಣುಕಾಸ್ವಾಮಿ ಕೊಲೆಯಲ್ಲ ‌ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ ಮತ್ತು ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಪವಿತ್ರಾ ಗೌಡ (ಸಂಗ್ರಹ ಚಿತ್ರ)
ಕೆಲ ಕೆಟ್ಟ ಅಭಿಮಾನಿಗಳಿಂದ್ಲೇ ಅವ್ರಿಗೆ ತೊಂದರೆ: 'ಕರಿಯಾ' ಫಿಲ್ಮ್ ನೋಡಲು ಬಂದ ದರ್ಶನ್ ಅಭಿಮಾನಿಗಳಿಗೆ ಪೊಲೀಸರ ವಾರ್ನಿಂಗ್!

ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ನಟ ದರ್ಶನ್​ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com