ಚಂದ್ರಶೇಖರ ಸ್ವಾಮೀಜಿ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ನನ್ನನ್ನು ದೇವೇಗೌಡರೇ ಉಚ್ಛಾಟಿಸಿದ್ದು: ಸಿದ್ದರಾಮಯ್ಯ

ಇಂದು ಭಾನುವಾರ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಜೆಡಿಎಸ್‌ ವಿರುದ್ಧ ಹರಿಹಾಯ್ದು ಮುಖ್ಯಮಂತ್ರಿಗಳು, ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದು ಸ್ಪಷ್ಟಪಡಿಸಿದರು.
CM Siddaramaiah paid floral tribute to ex CM Kengal Hanumanthayya
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಪುಣ್ಯತಿಥಿ ಅಂಗವಾಗಿ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಮುಸ್ಲಿಂಮರಿಗೆ ಮತದಾನ ಹಕ್ಕು ರದ್ದು ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದರು.

ಇಂದು ಭಾನುವಾರ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಜೆಡಿಎಸ್‌ ವಿರುದ್ಧ ಹರಿಹಾಯ್ದು ಮುಖ್ಯಮಂತ್ರಿಗಳು, ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, " ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು.

ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದೆವು

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ, ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಹೇಳಿದ್ದಾರೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ . ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ವಿವರಿಸಿದರು.

ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ. ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ . ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ . ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com