Bellary Hospital
ಬಳ್ಳಾರಿ ಆಸ್ಪತ್ರೆ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು: ರಾಜ್ಯ ಔಷಧ ನಿಯಂತ್ರಕ ಅಮಾನತು, ತನಿಖೆಗೆ ಸಮಿತಿ ರಚನೆ!

ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್‌ ಕಂಪನಿ’ಯನ್ನು ಕಪ್ಪುಪಟ್ಟಿಗೆ ಸೇರಿಸಿ, ಈ ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶ ನೀಡಲಾಗಿದೆ.
Published on

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐದು ಬಾಣಂತಿಯರ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ರಾಜ್ಯ ಔಷಧ ನಿಯಂತ್ರಕರನ್ನು ಅಮಾನತು ಮಾಡಿದೆ.

ಘಟನೆಯ ಕುರಿತಂತೆ ಶನಿವಾರ ಉನ್ನತಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ರಾಜ್ಯ ಔಷಧ ನಿಯಂತ್ರಕ ಉಮೇಶ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

'ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್‌ ಕಂಪನಿ’ಯನ್ನು ಕಪ್ಪುಪಟ್ಟಿಗೆ ಸೇರಿಸಿ, ಈ ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶ ನೀಡಲಾಗಿದೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಕುರಿತು ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿ, ವಾರದೊಳಗೆ ವರದಿ ಪಡೆಯಲಾಗುವುದು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕೂಡಾ ನಿರ್ಧರಿಸಲಾಗಿದೆ' ಎಂದರು.

Bellary Hospital
'ಕಳಪೆ ಗುಣಮಟ್ಟದ...'; ಬಳ್ಳಾರಿ ಆಸ್ಪತ್ರೆ 5 ಬಾಣಂತಿಯರ ಸಾವಿಗೆ ಕಾರಣ ಬಹಿರಂಗ!

ಅಲ್ಲದೆ 'ನವೆಂಬರ್‌ 11ರಿಂದ ಬಳ್ಳಾರಿಯಲ್ಲಿ ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ ಏಳು ಪ್ರಕರಣಗಳಲ್ಲಿ ನಾಲ್ವರು ಬಾಣಂತಿಯರು ಸಾವಿಗೀಡಾಗಿದ್ದಾರೆ. ಉಳಿದ ಮೂರು ರೋಗಿಗಳಲ್ಲಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ತಜ್ಞರ ಸಮಿತಿ ರಚಿಸಿ ಬಾಣಂತಿಯರ ಸಾವಿನ ಕುರಿತು ಪ್ರಾಥಮಿಕ ವರದಿ ಪಡೆಯಲಾಗಿದೆ. ‌ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದೆ. ಬಳ್ಳಾರಿಯಲ್ಲಿ ಬಳಸಲಾದ ಈ ದ್ರಾವಣವನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಘಟನೆಗೆ ಕಾರಣರಾದವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು. ಔಷಧ ನಿಯಂತ್ರಕರ ಮೇಲೆಯೂ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು' ಎಂದರು.

'ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದಿಂದ ರಾಜ್ಯದ ಇತರ ಕಡೆಗಳಲ್ಲಿಯೂ ಸಮಸ್ಯೆ ಆಗಿದೆಯೇ ಎಂಬ ಬಗ್ಗೆ ತಕ್ಷಣ ಸಮಗ್ರ ವರದಿ ಪಡೆಯಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮುಖ್ಯಮಂತ್ರಿ, ‘ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಗಂಭೀರ ಕ್ರಮಗಳನ್ನು‌ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

2 ಲಕ್ಷ ರೂ ಪರಿಹಾರ

ಔಷಧ ಮಾಫಿಯಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯ ಇದೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಹಲವರಿಂದ ವ್ಯಕ್ತವಾದವು. ಈ ವೇಳೆ 'ಮೃತ ಬಾಣಂತಿಯರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಲ್ಲದೆ ಸಾವಿಗೆ ಕಾರಣವಾದ ಔಷಧ ಪೂರೈಸಿದ ಕಂಪನಿಯಿಂದಲೂ ಪರಿಹಾರ ವಸೂಲಿ ಮಾಡಿ ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.

ತನಿಖೆಗೆ ಸಮಿತಿ ರಚನೆ

ಇನ್ನು ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸಂಭವಿಸಿದ ಇದೇ ರೀತಿಯ ಸಾವುಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದರು. ಈ ಸಮಿತಿಗೆ ವಾರದೊಳಗೆ ಸಮಗ್ರ ವರದಿ ಸಲ್ಲಿಸುವ ಹೊಣೆಗಾರಿಕೆ ವಹಿಸಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಳಸಲಾಗಿದ್ದ ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣದ ಎಲ್ಲಾ ಬ್ಯಾಚ್‌ಗಳನ್ನು ಹಿಂಪಡೆಯಲಾಗಿದ್ದು, ಸಾವಿಗೆ ಕಾರಣವೇ ಎಂದು ನಿರ್ಧರಿಸಲು ಪರಿಹಾರವನ್ನು ಪರೀಕ್ಷಿಸಲಾಗುತ್ತಿದೆ. ಡ್ರಗ್ಸ್ ಕಂಟ್ರೋಲರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಔಷಧ ನಿಯಂತ್ರಣ ಕಾಯ್ದೆಯಡಿ ಕಠಿಣ ನಿಯಮಾವಳಿಗಳ ಅಗತ್ಯವನ್ನು ಸಿಎಂ ಒತ್ತಿ ಹೇಳಿದರು, ಹೆಚ್ಚಿನ ಸುಧಾರಣೆಗಳಿಗಾಗಿ ಕೇಂದ್ರವನ್ನು ಸಂಪರ್ಕಿಸಲು ಚರ್ಚೆ ನಡೆಯುತ್ತಿದೆ. ತಮಿಳುನಾಡು ಮಾದರಿಯಲ್ಲಿ ಔಷಧ ನಿಯಂತ್ರಣ ಇಲಾಖೆ ಪುನರ್ ರಚನೆ ಹಾಗೂ ಔಷಧ ಖರೀದಿ ಪ್ರಕ್ರಿಯೆಯ ಕೂಲಂಕುಷ ಪರಿಶೀಲನೆಗೆ ಸಿದ್ದರಾಮಯ್ಯ ಸೂಚನೆ ನೀಡಿದರು. "ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣವು ರಾಜ್ಯದ ಇತರ ಭಾಗಗಳಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಉಂಟುಮಾಡಿದೆಯೇ ಎಂದು ತನಿಖೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com