ಉಡುಪಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅನುದಾನಕಕೆ ಮನವಿ ಸಲ್ಲಿಸಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಹೇಳಿದರು.
ಶನಿವಾರ ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಬಹುಮುಖ್ಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ಹೇಳಿದರು.
ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು ವಿಳಂಬ ಮಾಡದೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಚೆಕ್ ಡ್ಯಾಂ ನಿರ್ಮಾಣದಿಂದ ಅಂತರ್ಜಲ ಹೆಚ್ಚುತ್ತಿರುವ ಬಗ್ಗೆ ವೈಜ್ಞಾನಿಕ ವರದಿಯನ್ನೂ ಕೇಳಿದ್ದೆ. ಮೀನುಗಾರಿಕೆಗೆ ಅನುಕೂಲವಾಗುವಂತೆ ಹೆಜಮಾಡಿ ಮೀನುಗಾರಿಕಾ ಬಂದರಿನಲ್ಲಿ ಶೇ.80ರಷ್ಟು ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯು ಉಡುಪಿ ಜಿಲ್ಲೆಗೆ ಪ್ರಸಕ್ತ ವರ್ಷ ಎರಡು ಹೊಸ ಹಾಸ್ಟೆಲ್‌ಗಳಿಗೆ ಈಗಾಗಲೇ ಅನುಮೋದನೆ ನೀಡಿದ್ದು, ಹೆಚ್ಚುವರಿ ಹಾಸ್ಟೆಲ್‌ಗಳನ್ನು ತೆರೆಯುವಂತೆ ಸಭೆಯಲ್ಲಿ ಶಾಸಕರು ಮನವಿ ಮಾಡಿದರು.
ತಾಂತ್ರಿಕ ಕಾರಣಗಳಿಂದ ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಹಲವು ದಿನಗಳಿಂದ ಸರಿಯಾಗಿ ನಡೆಯುತ್ತಿಲ್ಲ ಎಂಬುದು ನನ್ನ ಗಮನಕ್ಕೆ ತರಲಾಗಿದ್ದು, ಜಿಲ್ಲಾಡಳಿತವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಸಮಸ್ಯೆಗೆ ಕೂಡಲೇ ಪರಿಹಾರ ನೀಡಬೇಕು ಸಚಿವರು ಅಧಿಕಾರಿಗಳಿಗ ಸೂಚನೆ ನೀಡಿದರು.
Advertisement