ಹಾಸನ: ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!

ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
IPS  officer Harshavardhan
ಮೃತ ಅಧಿಕಾರಿ ಹರ್ಷವರ್ಧನ್
Updated on

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.

ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ಹರ್ಷವರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ವರದಿ ಮಾಡಿಕೊಳ್ಳಲು ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಸಿದ್ದರಾಮಯ್ಯ ಸಂತಾಪ

ಹರ್ಷವರ್ಧನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ, ಹಾಸನ - ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

IPS  officer Harshavardhan
ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು, ಮತ್ತೋರ್ವನಿಗೆ ಗಾಯ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com