ದೇಶದ್ರೋಹಿಗಳ ಮೇಲಿನ ಕೇಸ್ ಹಿಂಪಡೆದ ಸರ್ಕಾರ, ಸ್ವಾಮೀಜಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿದೆ: ವಿಜಯೇಂದ್ರ

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿಗಳ ಭೇಟಿಯಾದ ಬಿಜೆಪಿ ನಾಯಕರು.
ಚಂದ್ರಶೇಖರನಾಥ ಸ್ವಾಮೀಜಿಗಳ ಭೇಟಿಯಾದ ಬಿಜೆಪಿ ನಾಯಕರು.
Updated on

ಬೆಂಗಳೂರು: ಸರ್ಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧದ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತಾ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಹೇಳಿದರು.

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರವು ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ. ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ಚಂದ್ರಶೇಖರನಾಥ ಸ್ವಾಮೀಜಿಗಳ ಭೇಟಿಯಾದ ಬಿಜೆಪಿ ನಾಯಕರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ​ ಸ್ವಾಮೀಜಿ ಪತ್ರ

ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ; ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನಕಲಿ ನೋಟಿಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ಕುರಿತು ಪದೇ ಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com