ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಸಚಿವ ಜಮೀರ್

ಇಂದು ಬೆಳಗ್ಗೆ ದಾಖಲೆ ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಚಿವರು, ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
 Zameer Ahmed Khan
ಸಚಿವ ಜಮೀರ್ ಅಹ್ಮದ್ ಖಾನ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳವಾರ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು.

ಇಂದು ಬೆಳಗ್ಗೆ ದಾಖಲೆ ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಚಿವರು, ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಲೋಕಾಯುಕ್ತ ಬುಲಾವ್ ನೀಡಿತ್ತು. ಈ ಹಿಂದೆ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, ಜಮೀರ್ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ, ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿತ್ತು. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು.

 Zameer Ahmed Khan
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಗೆ ಲೋಕಾಯುಕ್ತ ನೊಟೀಸ್

ನಂತರ ಸರ್ಕಾರ ಎಸಿಬಿ ರದ್ದು ಮಾಡಿ ಆದೇಶ ನೀಡಿದ್ದರಿಂದ, ಆ ಪ್ರಕರಣವನ್ನ ಈಗ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಅದರಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಜಮೀರ್ ಗೆ ಲೋಕಾಯುಕ್ತ ನೊಟೀಸ್ ನೀಡಿದ್ದ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com