ತರುಣ್ ಚುಗ್ ಜೊತೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆದಿದೆ, ಭಿನ್ನಮತದ ಬಗ್ಗೆ ನಡೆದಿಲ್ಲ: ಆರ್ ಅಶೋಕ

ತರುಣ್ ಚುಗ್ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಚುಗ್ ಅವರೊಂದಿಗೆ ರಾಜ್ಯ ನಾಯಕರ ಸಭೆ ಪಕ್ಷ ಸಂಘಟನೆ ವಿಷಯಕ್ಕೆ ಸೀಮಿತವಾಗಿತ್ತು. ಪಕ್ಷದಲ್ಲಿನ ಭಿನ್ನಮತೀಯ ಚಟುವಟಿಕೆಗಳಿಗೆ ಅಲ್ಲ ಎಂದು ತಿಳಿಸಿದ್ದಾರೆ.
R Ashok
ಆರ್. ಅಶೋಕ್online desk
Updated on

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಮತ ಮೂಡಿರುವ ನಡುವೆಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ತರುಣ್ ಚುಗ್ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಚುಗ್ ಅವರೊಂದಿಗೆ ರಾಜ್ಯ ನಾಯಕರ ಸಭೆ ಪಕ್ಷ ಸಂಘಟನೆ ವಿಷಯಕ್ಕೆ ಸೀಮಿತವಾಗಿತ್ತು. ಪಕ್ಷದಲ್ಲಿನ ಭಿನ್ನಮತೀಯ ಚಟುವಟಿಕೆಗಳಿಗೆ ಅಲ್ಲ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಅವರ ತಂದೆ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ತಂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಸಭೆಯನ್ನು ಭಿನ್ನಮತೀಯರನ್ನು ಒಟ್ಟುಗೂಡಿಸುವ ಪ್ರಯತ್ನ ಎಂದು ಹೇಳಲಾಗಿತ್ತು. ಆದರೆ, ಬಿಜೆಪಿ ನಾಯಕರು ಇದನ್ನು ಊಹಾಪೋಹ ಎಂದು ತಳ್ಳಿ ಹಾಕಿದ್ದಾರೆ.

ಇಂದಿನ ಸಭೆ ಕೇವಲ ಸಂಘಟನೆಗೆ ಸೀಮಿತವಾಗಿದೆ ಮತ್ತು ಬೇರೆ ಯಾವುದೇ ವಿಷಯದ ಬಗ್ಗೆ ಚರ್ಚಿಸಲಾಗಿಲ್ಲ ಎಂದು ಅಶೋಕ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಒಗ್ಗಟ್ಟಾಗಿದೆ ಎಂದು ಪ್ರತಿಪಾದಿಸಿದ ಅಶೋಕ್, ಪಕ್ಷದಲ್ಲಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದು ಇನ್ನು ಮೂರ್ನಾಲ್ಕು ದಿನಗಳಲ್ಲಿ ಸುಖಾಂತ್ಯಗೊಳ್ಳಲಿವೆ ಎಂದು ಪಕ್ಷದ ಕೇಂದ್ರ ನಾಯಕರು ಹೇಳಿರುವುದಾಗಿ ತಿಳಿಸಿದ್ದಾರೆ.

R Ashok
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಆರ್. ಅಶೋಕ್

ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷರು, ಶಾಸಕರು, ರಾಜ್ಯ ಮಟ್ಟದ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿ ಸದಸ್ಯರು ಭಾಗವಹಿಸಿದ್ದರು ಎಂದು ಚುಗ್ ಅವರೊಂದಿಗಿನ ಸಭೆಯ ಕುರಿತು ಅಶೋಕ್ ಮಾಹಿತಿ ನೀಡಿದ್ದಾರೆ.

ಅಶೋಕ್ ನೀಡಿರುವ ಮಾಹಿತಿಯ ಪ್ರಕಾರ, ಸದಸ್ಯತ್ವ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ಘಟಕ ಪಕ್ಷದೊಳಗೆ ನಾಲ್ಕನೇ ಸ್ಥಾನದಲ್ಲಿದೆ.

ನಾವು ರಾಜ್ಯದಲ್ಲಿ 74 ಲಕ್ಷ ಸದಸ್ಯರನ್ನು ಹೊಂದಿದ್ದೇವೆ. ನಾವು ಅದನ್ನು ಹೆಚ್ಚಿಸಬೇಕು. ನಾವು ಸಕ್ರಿಯ ಸದಸ್ಯರನ್ನು ಪಡೆಯಬೇಕು. ಇದು ಮುಂಬರುವ ಚುನಾವಣೆಯಲ್ಲಿ ನಮಗೆ ನೆರವಾಗಲಿದೆ ಎಂದು ಅಶೋಕ್ ಹೇಳಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷದ ಆಂತರಿಕ ಚುನಾವಣೆಗಳು ನಡೆಯಲಿರುವುದರಿಂದ, ಅವುಗಳನ್ನು ನಡೆಸಲು ತರುಣ್ ಚುಗ್ ಬಿಜೆಪಿ ರಾಜ್ಯ ನಾಯಕತ್ವಕ್ಕೆ ಮಾರ್ಗದರ್ಶನ ನೀಡಿದರು ಎಂದು ಅಶೋಕ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com