

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದ್ದು, ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದೆ.
ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ.
ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಆರಂಭವಾಗುತ್ತದೆ. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆಯಲ್ಲಿ ಈ ಭಾನುವಾರ ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ ರಂದು(ಭಾನುವಾರ) ಕನಾಟಕ ಲೋಕಸೋವಾ ಆಯೋಗವು-ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್‌ಸಿಎಲ್ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸೆ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್(ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಈ ಅವಧಿಯಲ್ಲಿ ಅಂದರ ಬೆಳಿಗ್ಗೆ 5.30 ರಿಂದ 7.00 ಗಂಟೆಯವರಗೆ ರೈಲುಗಳು 30 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ. ಬೆಳಿಗ್ಗೆ 7:00 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ. ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ.