
ಬೆಂಗಳೂರು: ಕಟ್ಟಡ ಕಲ್ಲು ಗಣಿಗಾರಿಕೆಯ ಮೇಲಿನ ರಾಯಧನವನ್ನು ಪ್ರತಿ ಮೆಟ್ರಿಕ್ ಟನ್‌ಗೆ 70 ರೂಪಾಯಿಯಿಂದ 80 ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 311.55 ಕೋಟಿ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.
ರಾಯಧನ ಪಾವತಿಸದೆ ಖನಿಜ ಸಾಗಣೆ ಮಾಡಿದರೆ ದಂಡ ವಸೂಲಿಗೆ ನಿರ್ಧರಿಸಲಾಗಿದೆ. 6,105 ರೂಪಾಯಿ ದಂಡ ವಿಧಿಸಲಾಗಿತ್ತು. ಕಳೆದ 6-7 ವರ್ಷಗಳಿಂದ ದಂಡ ವಸೂಲಿ ಆಗದೆ ಬಾಕಿ ಉಳಿದಿವೆ. ಹಾಗಾಗಿ ಒನ್ಟೈಮ್ ಸೆಟ್ಲ್ಮೆಂಟ್ಗೆ ಅವಕಾಶ ನೀಡಲಾಗಿದೆ ಎಂದರು.
ಇನ್ನು 11 ಜಿಲ್ಲೆಗಳಲ್ಲಿ ಡ್ರೋನ್‌ಗಳೊಂದಿಗೆ ಡಿಫರೆನ್ಷಿಯಲ್ ಜಿಯೋ ಪೊಸಿಷನಿಂಗ್ ಸಿಸ್ಟಮ್ (ಡಿಜಿಪಿಎಸ್) ಅಳವಡಿಕೆಗೆ ಸರ್ಕಾರ ಅನುಮೋದಿಸಿದೆ. ಈ ಉಪಕ್ರಮವು ಮೇಲ್ವಿಚಾರಣೆಯಲ್ಲಿ ನಿಖರತೆಯನ್ನು ಹೆಚ್ಚಿಸಲು ಮತ್ತು ಗಣಿಗಾರಿಕೆ ಚಟುವಟಿಕೆಗಳಲ್ಲಿ ಸಂಘರ್ಷಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದರು.
Advertisement