ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೈಕೋರ್ಟ್​ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಿತು.
Darshan
ನಟ ದರ್ಶನ್
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ ಶುಕ್ರವಾರವೂ ಜಾಮೀನು ಸಿಗಲಿಲ್ಲ. ರೆಗ್ಯೂಲರ್ ಬೇಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ

ಹೈಕೋರ್ಟ್​ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಮಾಡಿದ್ದ ವಾದಕ್ಕೆ ಇಂದು ಪ್ರತಿವಾದ ಮಾಡಿದ ಎಸ್​ಪಿಪಿ ಪ್ರಸನ್ನ ಕುಮಾರ್, ದರ್ಶನ್ ಆರೋಗ್ಯದ ಹಿನ್ನೆಲೆಯಲ್ಲಿ ಪಡೆದ ಜಾಮೀನನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಜಾಮೀನನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

ವಾದ-ಪ್ರತಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದರು.ಸದ್ಯ ಎಸ್​ಪಿಪಿ ಪ್ರಸನ್ನಕುಮಾರ್ ಪ್ರತಿವಾದಗಳನ್ನು ಆಲಿಸಿರುವ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಮತ್ತೊಂದೆಡೆ ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಕೂಡ ಡಿಸೆಂಬರ್ 11ಕ್ಕೆ ಮುಕ್ತಾಯ ಆಗಲಿದ್ದು ದರ್ಶನ್​ಗೆ ಜಾಮೀನು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Darshan
ಸರ್ಜರಿ ಆಗದಿದ್ದರೆ ನಾಳೆಯೇ ಸಾಯುತ್ತಾರೆ, ಲಕ್ವ ಹೊಡೆಯುತ್ತದೆ ಎಂದಿದ್ದರು; 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com