ಚಾಮರಾಜನಗರದಲ್ಲಿ ಜನವರಿ ತಿಂಗಳಲ್ಲಿ ವಿಶೇಷ ಸಂಪುಟ ಸಭೆ: ಅಧಿಕ ಅನುದಾನ ನಿರೀಕ್ಷೆ

ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪಟ್ಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ನಡೆಸುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ಈ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚುವರಿ ಹಣ ಸಿಗಬಹುದು ಎಂಬ ಭರವಸೆಯಲ್ಲಿದ್ದಾರೆ.

ಪ್ರಾದೇಶಿಕ ಅಸಮತೋಲನದ ಕುರಿತಾದ ನಂಜುಂಡಪ್ಪ ಸಮಿತಿಯ ವರದಿಯಲ್ಲಿ ಜಿಲ್ಲೆಯನ್ನು ಗುರುತಿಸಲಾಗಿದೆ. ಎಸ್‌ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಆರ್ ಹಿಲ್ಸ್‌ನಲ್ಲಿ ಮಿನಿ ಕ್ಯಾಬಿನೆಟ್ ಸಭೆ ನಡೆಸಿ ಆರೋಗ್ಯ ಕಾರ್ಯಕ್ರಮಗಳು ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ್ದರು.

ಮೈಸೂರು ಜಿಲ್ಲೆಯಿಂದ ಆಗಸ್ಟ್ 15, 1997 ರಂದು ಚಾಮರಾಜನಗರ ಜಿಲ್ಲೆಯನ್ನು ಪ್ರತ್ಯೇಕಗೊಳಿಸಲಾಯಿತು. ಆದರೆ ಹೆಚ್ಚಿನ ಅಭಿವೃದ್ಧಿಯನ್ನು ಕಾಣುವಲ್ಲಿ ವಿಫಲವಾಗಿದೆ. ಇಲ್ಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆಯಿಂದ ಇಲ್ಲಿಗೆ ಬಹುತೇಕ ಮುಖ್ಯಮಂತ್ರಿಗಳು ಹೋಗಲು ನಿರಾಕರಿಸುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರು ಜಿಲ್ಲೆಗೆ ಹಲವಾರು ಬಾರಿ ಭೇಟಿ ನೀಡುವ ಮೂಲಕ ಅದು ಸುಳ್ಳು, ಮೂಢನಂಬಿಕೆ ಎಂದು ಸಾಬೀತುಪಡಿಸಿದ್ದರು.

ಶೇಕಡಾ 51 ಭಾಗಕ್ಕಿಂತ ಹೆಚ್ಚು ಅರಣ್ಯ ಪ್ರದೇಶ, ಹುಲಿ ಸಂರಕ್ಷಿತ ಪ್ರದೇಶಗಳು, ಐತಿಹಾಸಿಕ ದೇವಾಲಯಗಳು ಮತ್ತು ಸಾಕಷ್ಟು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಯ ಅಭಿವೃದ್ಧಿಗೆ ಪರಿಶೀಲನಾ ಸಭೆ ನಡೆಸುವ ಮೂಲಕ ಇತಿಹಾಸವನ್ನು ಸೃಷ್ಟಿಸಲು ಸಿಎಂ ಸಿದ್ದರಾಮಯ್ಯ ಬಯಸಿದ್ದಾರೆ.

ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪಟ್ಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ನಡೆಸುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಚಿವರುಗಳು ಜನರ ಅಗತ್ಯಗಳನ್ನು ಪಟ್ಟಿ ಮಾಡಲು ಜಿಲ್ಲಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ನೀರಾವರಿ, ಮೂಲ ಆರೋಗ್ಯ, ಮೂಲಸೌಕರ್ಯ, ವಸತಿ ಮತ್ತು ಗ್ರಾಮೀಣ ಉದ್ಯೋಗಗಳನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ಸುಧಾರಿಸಲು ಗಮನಹರಿಸಲು ಬಯಸುತ್ತಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸೌಲಭ್ಯ ಕೊರತೆ ಇರುವುದರಿಂದ ಹನೂರು ತಾಲೂಕು ಹಾಗೂ ಗಡಿ ಭಾಗದ ಜನರು ಗಡಿಯಾಚೆ ತಮಿಳು ನಾಡಿನ ಆಸ್ಪತ್ರೆಗೆ ಹೋಗುವ ಅನಿವಾರ್ಯತೆಯಿದೆ.

CM Siddaramaiah
ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ: ಮಸೂದೆಗೆ ಸಂಪುಟ ಒಪ್ಪಿಗೆ

ಅಧಿಕಾರಿಗಳು ಆಶ್ರಯ ರಹಿತ ಕುಟುಂಬಗಳ ಸಮೀಕ್ಷೆ ನಡೆಸುತ್ತಿದ್ದಾರೆ. ಇಂದಿರಾಗಾಂಧಿ ಆಳ್ವಿಕೆಯಲ್ಲಿ ನಿರ್ಮಿಸಲಾದ ಬುಡಕಟ್ಟು ಮನೆಗಳ ಸ್ಥಿತಿಗತಿಗಳನ್ನು ಅಧ್ಯಯನ ಮಾಡುತ್ತಾರೆ. ಆದಿವಾಸಿಗಳಿಗೆ 3 ಸಾವಿರ ಮನೆಗಳ ಅಗತ್ಯವಿದ್ದು, ನಿರಾಶ್ರಿತರಿಗೆ ಸೂರು ಕಲ್ಪಿಸಲು ‘ಸಿದ್ದು ನಿವಾಸ’ ಅಥವಾ ‘ಸಿಎಂ ನಿವಾಸ’ ಯೋಜನೆ ಆರಂಭಿಸಲು ಕರೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಸರಕಾರ 11,770 ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಿ, 5,000 ಕೋಟಿ ರೂಪಾಯಿ ಬಿಡುಗಡೆ ಮಾಡಿದಾಗಿನಿಂದ, ಗ್ರಾಮೀಣ ಸಂಪರ್ಕವನ್ನು ಸುಧಾರಿಸಲು, ಮನುಷ್ಯ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು, ಅಪೌಷ್ಟಿಕತೆ, ಬಾಲ್ಯವಿವಾಹ, ಶಿಕ್ಷಣ ಉತ್ತೇಜನಕ್ಕೆ ಹಣ ಮಂಜೂರು ಮಾಡುವ ನಿರೀಕ್ಷೆಯಿದೆ. ಪ್ರವಾಸೋದ್ಯಮವು ತಮಿಳುನಾಡು ಮತ್ತು ಕೇರಳದ ಕಡೆಗೆ ವಲಸೆಯನ್ನು ತಡೆಯುತ್ತದೆ.

ಜನವರಿಯಲ್ಲಿ ಇಲ್ಲಿ ಸಂಪುಟ ಸಭೆ ನಡೆಸಲು ಸಿಎಂ ಒಪ್ಪಿಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ವೆಂಕಟೇಶ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com