BIMS: ಬಾಣಂತಿಯರ ಬಲಿ ಪಡೆದ ಆಸ್ಪತ್ರೆಗೆ ಲೋಕಾಯುಕ್ತ ಭೇಟಿ, ಸ್ವಯಂಪ್ರೇರಿತ ಪ್ರಕರಣ ದಾಖಲು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ
Updated on

ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಜಿಲ್ಲಾಸ್ಪತ್ರೆಗೆ, ಬಿಮ್ಸ್ ಆಸ್ಪತ್ರೆಗೆ ಲೋಕಾಯಕ್ತ ಡಿವೈಎಸ್ಪಿ ವಸಂತಕುಮಾರ್ ಹಾಗೂ ಸಿಪಿಐ ಮೊಹಮ್ಮದ್ ರಫೀಕ್ ನೇತೃತ್ವದ ತಂಡದ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದರು.

ದಾಳಿ ವೇಲೆ ಅಧಿಕಾರಿಗಳು ಬಾಣಂತಿಯರ ಸಾವಿನ ಪ್ರಕರಣದ ದಾಖಲೆ ಪರಿಶೀಲಿಸಿ ಅವುಗಳನ್ನು ವಶಕ್ಕ ಪಡೆದುಕೊಂಡಿದ್ದಾರೆ. ಜೊತೆಗೆ ಬಾಣಂತಿಯರಿಗೆ ನೀಡಿರುವ ಔಷಧಿಯೂ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ, ಅಲ್ಲದೆ, ಬಾಣಂತಿಯರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲದ ನಿರ್ದಿಷ್ಟ ಬ್ಯಾಚ್'ನ ಔಷಧಿ (ರಿಂಗರ್ ಲ್ಯಾಕ್ಟೇಟ್ ದ್ರಾವಣ) ಸ್ಯಾಂಪಲ್ ಗಳನ್ನೂ ಕೂಡ ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ಸ್ವಯಂ ಪ್ರೇರಿತ ಪ್ರಕರಣ ದಾಖಲು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕ ಲೋಕಾಯುಕ್ತ
ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರ ಸಾವು ಪ್ರಕರಣ: ನಮಗೂ ನೋವಾಗಿದೆ, ತಜ್ಞರ ವರದಿ ಬಳಿಕ ಕ್ರಮ- ರಾಜ್ಯ ಸರ್ಕಾರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಳ್ಳಾರಿ ಸರ್ಕಾರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್‌ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಈ ರೀತಿಯ ಘಟನೆಗಳು ಬೇರೆ ಯಾವುದಾದರೂ ಜಿಲ್ಲೆಯಲ್ಲಿಯೂ ಸಹಾ ಜರುಗಿರಬಹುದಾದ ಸಂಭವವಿರುವುದರಿಂದ, ಆ ಜಿಲ್ಲೆಗಳಲ್ಲಿ ಸದ್ಯ ಔಷಧಿ ಸರಬರಾಜು ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಲೋಕಾಯುಕ್ತರು ಆದೇಶಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಘಟನೆ ಸಂಬಂಧ ವಿವರವಾದ ವರದಿ. ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಹಾಗೂ ದುರ್ಘಟನೆಗೆ ಕಾರಣವಾದ ಔಷಧವವನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಔಷಧವನ್ನು ನಿಯಂತ್ರಿಸುವ ಸಲುವಾಗಿ ತೆಗೆದುಕೊಂಡಿರುವ ಕ್ರಮ. ದುರ್ಘಟನೆಯಿಂದ ಮರಣ ಹೊಂದಿರುವ ಬಾಣಂತಿಯರ ಕುಟುಂಬಕ್ಕೆ ನೀಡಿರುವ ಪರಿಹಾರದ ಮಾಹಿತಿಯನ್ನು ಸಲ್ಲಿಸುವಂತೆ ಮತ್ತು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ಕಾರ್ಯ ವೈಖರಿಯನ್ನು ಪರಿಶೀಲಿಸಲು ನಿರ್ದೇಶಿಸಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com