
ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣ ಕುರಿತು ಸಂಪೂರ್ಣ ವರದಿ ಕೇಳಿದ್ದು, ಸಮಗ್ರ ತನಿಖೆ ನಡೆಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಆಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈಗಾಗಲೇ ಔಷಧಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ. ತನಿಖೆ ನಡೆಯುತ್ತಿದೆ. ಆ ಕಂಪೆನಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು.
ಬಾಣಂತಿಯರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು 3 ತಿಂಗಳ ವರದಿ ಕೇಳಿದ್ದೇವೆ, ಮಹಿಳಾ ಇಲಾಖೆಯಿಂದ ಪೌಷ್ಠಿಕಾಂಶ ಆಹಾರ ಪೂರೈಕೆಯಾಗುತ್ತಿದೆಯೇ ಎಂದು ಸಹ ಪರಿಶೀಲಿಸುತ್ತಿದ್ದೇವೆ ಎಂದರು.
Advertisement