ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರ ಸಾವು ಪ್ರಕರಣ: ನಮಗೂ ನೋವಾಗಿದೆ, ತಜ್ಞರ ವರದಿ ಬಳಿಕ ಕ್ರಮ- ರಾಜ್ಯ ಸರ್ಕಾರ

ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.
ಮೃತ ಬಾಣಂತಿಯರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿರುವ ಸಚಿವ ದಿನೇಶ್ ಗುಂಡೂರಾವ್.
ಮೃತ ಬಾಣಂತಿಯರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿರುವ ಸಚಿವ ದಿನೇಶ್ ಗುಂಡೂರಾವ್.
Updated on

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರು ಹಾಗೂ ಶಿಶುಗಳ ಸಾವು ಪ್ರಕರಣ ನಮಗೂ ನಮಗೂ ಆತಂಕ, ನೋವು ತಂದಿದೆ. ಪ್ರಕರಣ ಸಂಬಂಧ ನಿಷ್ಪಕ್ಷವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲಾದೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ,

ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಲೋಕಾಯುಕ್ತ ತಂಡ ಬಳ್ಳಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಗೆ ಭೇಟಿ ನೀಡಿತು. ಇದೇ ವೇಳೆ ಮೃತ ಬಾಣಂತಿಯರ ಕುಟುಂಬ ಸದಸ್ಯರನ್ನು ಆರೋಗ್ಯ ಸಚಿವರು ಭೇಟಿಯಾಗಿ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರಂತವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರ ಸಂಬಂಧ ಚರ್ಚೆ ನಡೆಸಲಾಗುವುದು. ಕೂಲಂಕಷವಾಗಿ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಲೋಕಾಯುಕ್ತ ತಂಡವು ಜಿಲ್ಲಾಸ್ಪತ್ರೆ ಮತ್ತು ವಿಮ್ಸ್‌ನಲ್ಲಿರುವ ಔಷಧ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದೆ. ತಾಯಂದಿರ ಸಾವಿನ ಕಾರಣಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿದ್ದು, ತಜ್ಞರ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೃತ ಬಾಣಂತಿಯರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿರುವ ಸಚಿವ ದಿನೇಶ್ ಗುಂಡೂರಾವ್.
ಬಳ್ಳಾರಿ: ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ; ಪರಿಶೀಲನೆ

ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ಮತ್ತು ವೇರ್‌ಹೌಸಿಂಗ್ ಸೊಸೈಟಿಯು ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಬಳಕೆಗೆ ಯೋಗ್ಯವಾಗಿಲ್ಲ ಎಂದು ತಿಳಿಸಲಾಗಿದೆ. ಆದರೂ ಕೇಂದ್ರ ಔಷಧ ಪ್ರಯೋಗಾಲಯ (ಸಿಡಿಎಲ್) ಸಕಾರಾತ್ಮಕ ವರದಿಯನ್ನು ನೀಡಿದೆ. ಪ್ರತಿಕ್ರಿಯೆಯಾಗಿ, ಸ್ಪಷ್ಟೀಕರಣಕ್ಕಾಗಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಪತ್ರವನ್ನು ಕಳುಹಿಸಲಾಗಿದೆ. ಇದೀಗ ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಲಾಗುವುದು. ರಾಜ್ಯಾದ್ಯಂತ ಶಿಶುಗಳ ಸಾವಿನ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುವುದು. ಶಿಶುಗಳ ಸಾವಿನ ಕಾರಣಗಳನ್ನು ಅಧ್ಯಯನ ಮಾಡಲು ತಜ್ಞರ ತಂಡವನ್ನು ಕಳುಹಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಶಿಶುವಿನ ಅಸ್ವಾಭಾವಿಕ ಸಾವಿನ ಬಗ್ಗೆ ನಮಗೆ ಮಾಹಿತಿ ಬಂದ ನಂತರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳ ನೇತೃತ್ವದ ತಂಡವನ್ನು ರಚಿಸಿ ಅದಕ್ಕೆ ಕಾರಣಗಳನ್ನು ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದೇವೆಂದು ತಿಳಿಸಿದರು.

ಈ ನಡುವೆ ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮಾಜಿ ಸಚಿವ ಬಿ.ಶ್ರೀರಾಮುಲು ಶನಿವಾರ ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಭೇಟಿಯಾದ ಆರೋಗ್ಯ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಶ್ರೀರಾಮುಲು ಅವರು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com