
ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಹೇಳಿದ್ದಾರೆ.
ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಅತಿಥಿ ಶಿಕ್ಷಕರ ಗೌರವಧನವನ್ನು 15 ಸಾವಿರ ರೂ. ಮತ್ತು 16 ಸಾವಿರ ರೂ.ಗೆ ಪರಿಷ್ಕರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷಾಂತ್ಯದವರೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
ಇದೇ ವೇಳೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಜಾಗದಲ್ಲಿ ಅರೆಕಾಲಿಕ ಶಿಕ್ಷಕರನ್ನು ನೇಮಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Advertisement