
ಹುಬ್ಬಳ್ಳಿ: ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಇದೆ ಎಂದು ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಾರೆ. ಆದರೆ, ಬೇರೆ ರಾಜ್ಯಗಳಲ್ಲಿ ಬಿಜೆಪಿ ಅವರೇ ಗ್ಯಾರಂಟಿ ಘೋಷಣೆ ಮಾಡುತ್ತಿದ್ದು, ಅವರದ್ಧು ದ್ವಂಧ್ವ ನೀತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದು, ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಸ್ಪಷ್ಟ ನಿಲುವು ಇಲ್ಲ ಬರೀ ಸುಳ್ಳು ಅಪ್ರಚಾರ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಯಾವ ಕೆಲಸ ದುಡ್ಡು ಇಲ್ಲದೆ ನಿಂತಿದಿದೆ ಬಿಜೆಪಿ ಅವರು ಸಾಬೀತು ಮಾಡಲಿ ಎಂದು ಇದೇ ವೇಳೆ ಸವಾಲು ಹಾಕಿದರು.
ಅಧಿವೇಶ ಕುರಿತು ಮಾತನಾಡಿ, ಸೋಮವಾರದಿಂದ (ಡಿಸೆಂಬರ್ 9)ದಿಂದ ಆರಂಭವಾಗುವ ಚಳಿಗಾಲದ ಕಲಾಪದಲ್ಲಿ ಉತ್ತರ ಕರ್ನಾಟಕದ ಬಗ್ಗೆ, ಇಲ್ಲಿನ ಸಮಸ್ಯೆ ಹಾಗೂ ಅಭಿವೃದ್ಧಿಯ ಬಗ್ಗೆ ಹೆಚ್ಚು ಚರ್ಚೆಯಗಬೇಕು ಎನ್ನುವ ಒತ್ತಾಯ ಇದೆ. ಉತ್ತರ ಕರ್ನಾಟಕದ ಅಭಿವೃದ್ಧಿಯಾಗಿ ಜನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ನಗರಗಳಿಗೆ ಹಾಗೂ ಉತ್ತರ ಭಾರತದ ಕಡೆ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದರು. ಬಳಿಕ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ಬಾಣಂತಿಯ ಸಾವು ಪ್ರಕರಣ ಕುರಿತು ಮಾತನಾಡಿ, ಈಗಾಗಲೇ ಸಭೆ ನಡೆಸಲಾಗಿದ್ದು, ಕಳಪೆ ಔಷಧಿ ಪೂರೈಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ, ಆ ಕಂಪನಿಯನ್ನು ಬ್ಲಾಕ್ ಲಿಸ್ಟ್ ಗೆ ಹಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಪೂರೈಕೆದಾರರನ್ನು ವಿಚಾರಣೆ ನಡೆಸಲು ಹೇಳಲಾಗಿದೆ. ಡ್ರಗ್ ಕಂಟ್ರೋಲ್ ಅವರನ್ನು ಅಮಾನತು ಮಾಡಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೆವೆ. ಒಂದು ವೇಳೆ ಔಷಧೀಯ ತಯಾರಿಕೆ ಸಂಸ್ಥೆ ಕಳಪೆ ಔಷಧಿ ಸರಬರಾಜು ಮಾಡಿರುವುದು ನಿಜವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸಾವನಪ್ಪಿರುವ ಬಾಣಂತಿಯರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು
Advertisement