ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.
Jewels and cash seized from the residence of an official
ಲೋಕಾಯುಕ್ತರು ವಶಕ್ಕೆ ಪಡೆದ ನಗದು, ಚಿನ್ನಾಭರಣ ಚಿತ್ರ
Updated on

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆಯಿಂದಲೇ ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟ್ರಿಕಲ್ ) ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

Jewels and cash seized from the residence of an official
ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ಇಬ್ಬರು BBMP ಅಧಿಕಾರಿಗಳ ವಿಚಾರಣೆ

ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಡಿಎಫ್ ಪಿ ನಂಜುಂಡಯ್ಯ, ಗದಗ್ ನ ಇಇ ಕಚೇರಿಯ ಎಸ್ ಡಿ ಎ ಲಕ್ಷ್ಮಣ್, ಕಲಬುರಗಿ ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ರಾಮಪ್ಪ ಅವರ ಮನೆ ಹಾಗೂ ಫಾರ್ಮ್ ಹೌಸ್, ರಾಯಚೂರಿನ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ, ಚಿತ್ರದುರ್ಗದ ಹಿರಿಯೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಮನೆ ಮೇಲೂ ದಾಳಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com