ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಂಗಾವತಿ: ಬೈಕ್​ಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು

ಮೃತರನ್ನು ಮರಕುಂಬಿ ಗ್ರಾಮದ ಮಂಜುನಾಥ ಪರಸಪ್ಪ ನಾಯಕ್(38) ಹಾಗೂ ಆತನ ಪತ್ನಿ ನೇತ್ರಾವತಿ ಮಂಜುನಾಥ ನಾಯಕ್ (33) ಎಂದು ಗುರುತಿಸಲಾಗಿದೆ.
Published on

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತರನ್ನು ಮರಕುಂಬಿ ಗ್ರಾಮದ ಮಂಜುನಾಥ ಪರಸಪ್ಪ ನಾಯಕ್(38) ಹಾಗೂ ಆತನ ಪತ್ನಿ ನೇತ್ರಾವತಿ ಮಂಜುನಾಥ ನಾಯಕ್ (33) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಒಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಬಾಲಕ ಮರಕುಂಬಿ ಗ್ರಾಮದ ಮಂಜುನಾಥ ನಾಯಕ್ ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ
ವಿಜಯಪುರ: ಕಬ್ಬು ಕಟಾವು ಯಂತ್ರ- ಕಾರಿನ ನಡುವೆ ಭೀಕರ ಅಪಘಾತ; ಐವರ ದುರ್ಮರಣ

ಕೂಲಿ ಕೆಲಸದ ನಿಮಿತ್ತ ಗಂಗಾವತಿಗೆ ಹೊರಟಿದ್ದ ದಂಪತಿಯ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

X

Advertisement

X
Kannada Prabha
www.kannadaprabha.com