ಆಸ್ತಿ ತೆರಿಗೆ ಸಂಗ್ರಹ: ಮಹದೇವಪುರ ವಲಯ ನಂ.1, ನವೆಂಬರ್ ಅಂತ್ಯಕ್ಕೆ 1154.49 ಕೋಟಿ ರೂ ಸಂಗ್ರಹ

ಆಸ್ತಿ ಮಾಲೀಕರೊಂದಿಗೆ ನಿರಂತರವಾಗಿ ಸಭೆಗಳನ್ನು ನಡೆಸುವ ಮೂಲಕ ಜನರಿಗೆ ಓಟಿಸ್ ಬಗ್ಗೆ ಮಾಹಿತಿ ನೀಡಿರುವುದರಿಂದ ಅತಿ ಹೆಚ್ಚು ಆಸ್ತಿ-ತೆರಿಗೆ ಸಂಗ್ರಹಿಸಲು ಸಾಧ್ಯವಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.
ತೆರಿಗೆ (ಸಂಗ್ರಹ ಚಿತ್ರ)
ತೆರಿಗೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಲ್ಲಾ ಎಂಟು ವಲಯಗಳಲ್ಲಿ ದಾಖಲೆ ಮಟ್ಟದಲ್ಲಿ ಆಸ್ತಿ ಸಂಗ್ರಹಿಸಿದೆ. ಈ ಪೈಕಿ ಮಹದೇವಪುರ ವಲಯದಲ್ಲಿ ನವೆಂಬರ್ ಮಾಸಾಂತ್ಯಕ್ಕೆ ಅತ್ಯಧಿಕ 1154.49 ಕೋಟಿ ರೂ. ಸಂಗ್ರಹವಾಗಿದೆ.

ಸರ್ಕಾರ ಮತ್ತು ಪಾಲಿಕೆಯಿಂದ ಜಾರಿಗೆ ತರಲಾದ ಓಟಿಎಸ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಸಲುವಾಗಿ ಉಪ-ವಿಭಾಗ ಮತ್ತು ವಾರ್ಡ್‌ ಮಟ್ಟದಲ್ಲಿ ಆಸ್ತಿ ಮಾಲೀಕರೊಂದಿಗೆ ನಿರಂತರ ಜನ ಸಂಪರ್ಕ ಸಭೆ ನಡೆಸಲಾಗಿದೆ.

ಅತಿ ಹೆಚ್ಚು ಬಾಕಿ ಉಳಿಸಿಕೊಂಡಿದ್ದ ಸುಸ್ತಿದಾರರು, ಆಸ್ತಿ-ತೆರಿಗೆ ಪರಿಷ್ಕರಣೆಗೊಂಡಿರುವ ಪ್ರಕರಣಗಳು ಹಾಗೂ ತೆರಿಗೆ ವ್ಯಾಪ್ತಿಗೆ ಒಳಪಡೆ ಇದ್ದಂತಹ ಆಸ್ತಿ ಮಾಲೀಕರೊಂದಿಗೆ ನಿರಂತರವಾಗಿ ಸಭೆಗಳನ್ನು ನಡೆಸುವ ಮೂಲಕ ಜನರಿಗೆ ಓಟಿಸ್ ಬಗ್ಗೆ ಮಾಹಿತಿ ನೀಡಿರುವುದರಿಂದ ಅತಿ ಹೆಚ್ಚು ಆಸ್ತಿ-ತೆರಿಗೆ ಸಂಗ್ರಹಿಸಲು ಸಾಧ್ಯವಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯ ಕೆ.ಆರ್ ಪುರ ಉಪ-ವಿಭಾಗ ಹಾಗೂ ಹೂಡಿ ಉಪ-ವಿಭಾಗಗಳೆರಡೂ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಶೇ.90ರಷ್ಟು ಪ್ರಗತಿ ಸಾಧಿಸಿದ್ದು, ಒಟ್ಟಾರೆಯಾಗಿ ಮಹದೇವಪುರ ವಲಯವು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಶೇ.88.19 ರಷ್ಟು ಗುರಿ ಸಾಧಿಸಿದೆ ಎಂದು ಹೇಳಿದ್ದಾರೆ. ಇತರೆ ವಲಯಗಳಲ್ಲಿ 150-725 ಕೋಟಿ ರೂ.ವರೆಗೆ ತೆರಿಗೆ ಸಂಗ್ರಹಿಸಲಾಗಿದೆ ಎಂದು ಕಂದಾಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತೆರಿಗೆ (ಸಂಗ್ರಹ ಚಿತ್ರ)
ಬೆಂಗಳೂರು: ಅವಳಿ ಸುರಂಗ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ನಿರ್ಧಾರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com