
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು.
ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.
ಕಾನೂನಿನ ಸಮಸ್ಯೆಯಿಂದಾಗಿ ಯಾವುದೇ ವಿಚಾರವನ್ನು ಬಹಿರಂಗಗೊಳಿಸದಂತೆ ಕುಟುಂಬದವರು ಆಸ್ಪತ್ರೆಯವರಿಗೆ ಹೇಳಿರುವುದಾಗಿ ತಿಳಿದುಬಂದಿದೆ.
ದರ್ಶನ್ ಅವರ ಶಸ್ತ್ರಚಿಕಿತ್ಸೆ ಗೌಪ್ಯವಾಗಿರಬೇಕು. ಅವರ ಚಿಕಿತ್ಸೆಯಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಕಾರ್ಯವಿಧಾನದ ಬಗ್ಗೆ ತಿಳಿದಿರಬೇಕು, ಬೇರೆ ಯಾರಿಗೂ ತಿಳಿಯಬಾರದು ಎಂದು ಅವರ ಕುಟುಂಬದ ಒತ್ತಾಯವಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Advertisement