
ಬೆಂಗಳೂರು: ನೆರೆಯ ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ(Bengaluru rain) ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.
ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿ ಶಾಲೆ-ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ(cyclone) ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ತಮಿಳು ನಾಡಿನಲ್ಲಿ(Tamil Nadu rain) ವ್ಯಾಪಕ ಮಳೆಯಾಗುತ್ತಿದೆ, ಬೆಂಗಳೂರಿನಲ್ಲಿ ಸಹ ಅದರ ಪ್ರಭಾವ ಗೋಚರವಾಗುತ್ತಿದೆ.
ಹವಾಮಾನ ಇಲಾಖೆಯಿಂದ ಎಚ್ಚರಿಕೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಟ್ರಫ್ (ದಟ್ಟಮೋಡ) ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.13 ಮತ್ತು 14ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿಒಣ ಹವೆ ಇರಲಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
Advertisement