
ಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯು ಅವಧಿ ಮೀರಿದ ಮತ್ತು ‘ವಯಸ್ಸಾದ’ ಬಸ್‌ಗಳನ್ನು ಓಡಿಸುತ್ತಿದೆ ಎಂದು ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಸಿಎಜಿ) ವರದಿ ಬಹಿರಂಗಪಡಿಸಿದೆ.
BMTC ಯ ಸುಮಾರು ಶೇ. 25 ರಷ್ಟು ಬಸ್‌ಗಳ ಅವಧಿ ಮೀರಿದ್ದು, ನಿಯಮಗಳ ಪ್ರಕಾರ ಅವು ಬಳಕೆಗೆ ಯೋಗ್ಯವಲ್ಲ ಎಂದು ಹೇಳಲಾಗಿದೆ.
2017-18 ಮತ್ತು 2021-22 ರ ಅವಧಿಯಲ್ಲಿ BMTC ಬಸ್ ಗಳ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ ನಡೆಸಿ ಈ ವರದಿ ನೀಡಲಾಗಿದೆ. ಈ ವರದಿಯನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಶೇ. 12.60 ರಿಂದ ಶೇ. 29.08 ರಷ್ಟು ಬಸ್ ಗಳು ಅವಧಿ ಮೀರಿದ್ದಾಗಿದ್ದವು. 841 ರಿಂದ 1,909 ಸಾಮಾನ್ಯ ಬಸ್‌ಗಳು ಅವಧಿ ಮೀರಿದೆ ಎಂದು ಸಿಎಜಿ ವರದಿ ಹೇಳಿದೆ.
ಬಿಎಂಟಿಸಿ ಘಟಕಗಳಲ್ಲಿ ಬಸ್‌ಗಳ ಸಮರ್ಪಕ ನಿರ್ವಹಣೆ ಮಾಡದ ಕಾರಣದಿಂದಾಗಿ ಬಸ್‌ಗಳ ಎಂಜಿನ್‌ಗಳು, ಬ್ಯಾಟರಿ, ಬಿಡಿಭಾಗಗಳ ಕಾರ್ಯಕ್ಷಮತೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ಕೆಲ ಬಿಡಿಭಾಗಗಳ ಖರೀದಿ, ಎಂಜಿನ್‌ಗಳು, ಇಂಧನ ಇಂಜೆಕ್ಷನ್ ಪಂಪ್‌ಗಳ ಮರುಪರಿಶೀಲನೆಗಾಗಿ ಕೆಎಸ್ಸಾರ್ಟಿಸಿಯನ್ನು ಅವಲಂಬಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ವರದಿಯಲ್ಲಿ ಬಿಎಂಟಿಸಿ ಆರ್ಥಿಕ ನಿರ್ವಹಣೆಯಲ್ಲಿನ ಸಮಸ್ಯೆಗಳ ಕುರಿತಂತೆ ಹಲವು ಅಂಶಗಳನ್ನು ಬಹಿರಂಗಪಡಿಸಲಾಗಿದೆ. ಅದರಂತೆ ನಿಗಮದ ಬಸ್‌ಗಳ ಪ್ರತಿ ಕಿಮೀಗಳಿಕೆಯು ವೆಚ್ಚಕ್ಕಿಂತ ಕಡಿಮೆಯಿದೆ. ಅದರಂತೆ 2017-18ರಲ್ಲಿ ಶೇ. 133.59ರಷ್ಟಿದ್ದ ನಿರ್ವಹಣಾ ವೆಚ್ಚದ ಅನುಪಾತ ಶೇ. 133.59 ರಿಂದ 2021-22ಕ್ಕೆ ಶೇ. 222.62 ಹೆಚ್ಚಳವಾಯಿತು. ಅದರಲ್ಲಿ ಸಿಬ್ಬಂದಿ ವೆಚ್ಚ ಶೇ. 60, ಇಂಧನ ವೆಚ್ಚ ಶೇ. 27ರಷ್ಟಾಗಿದೆ ಎಂದು ತಿಳಿಸಿದೆ.
Advertisement