ರಾಜ್ಯದ 4.5 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ನೇರ ಲಾಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೂ. 1,20,000 ಕೋಟಿ ಹಣವನ್ನು ಈ ವರ್ಷ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ.
CM Siddaramaiah, DCM DK Shivakumar and others
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು
Updated on

ರೋಣ: ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದು, ಪ್ರತಿಪಕ್ಷಗಳ ವಿರೋಧದ ಬಗ್ಗೆ ಜನ ಜಾಗೃತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರೂ. 200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ರೂ. 1,20,000 ಕೋಟಿ ಹಣವನ್ನು ಈ ವರ್ಷ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ ಎಂದು ಟೀಕಿಸಿದರು.

ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ.ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದರು.

CM Siddaramaiah, DCM DK Shivakumar and others
ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಮಹಿಳೆಯರ ಯಶೋಗಾಥೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ. ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಶ್ಲಾಘಿಸಿದರು.

ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿಧಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೀನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ಗ್ಯಾರಂಟಿಗಳು ಎಲ್ಲಾ ವರ್ಗದ ಜನರನ್ನು ತಲುಪಿದ್ದು, ಅವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com