ಕೋವಿಡ್-19 ನಿರ್ವಹಣೆ ವೇಳೆ ಅವ್ಯವಹಾರ: SIT ರಚನೆ ಸಾಧ್ಯತೆ; BSY, ಬೊಮ್ಮಾಯಿ, ಸುಧಾಕರ್-ಶ್ರೀರಾಮುಲುಗೆ ಅಕ್ರಮದ ಉರುಳು?

ಯಡಿಯೂರಪ್ಪ ಅಲ್ಲದೆ, ಅವರ ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೂ ಅಕ್ರಮದ ಬಿಸಿ ತಾಗಬಹುದು ಎಂದು ಮೂಲಗಳು ತಿಳಿಸಿವೆ.
BSY, Sriramulu, Bommai, Dr Sudhakar
ಯಡಿಯೂರಪ್ಪ, ಶ್ರೀರಾಮುಲು, ಬೊಮ್ಮಾಯಿ ಮತ್ತು ಸುಧಾಕರ್
Updated on

ಬೆಂಗಳೂರು: 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್‌ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ, ಹೀಗಾಗಿ ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಯಡಿಯೂರಪ್ಪ ಅಲ್ಲದೆ, ಅವರ ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೂ ಅಕ್ರಮದ ಬಿಸಿ ತಾಗಬಹುದು ಎಂದು ಮೂಲಗಳು ತಿಳಿಸಿವೆ. ಬಹುಕೋಟಿ ಹಗರಣದ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಐಜಿಪಿ ಅಥವಾ ಎಡಿಜಿಪಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಸಾಧ್ಯತೆಯಿದೆ. ವಿವಿಧ ಪ್ರಕರಣಗಳಲ್ಲಿ ಎಫ್‌ಐಆರ್‌ಗಳು ದಾಖಲಾಗುವುದರಿಂದ, ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್‌ಐಟಿಯನ್ನು ಸ್ಥಾಪಿಸುವುದು ಉತ್ತಮ. ನವೆಂಬರ್ 14 ರಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಯೋಜಿಸಲಾಗಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಎಸ್‌ಐಟಿ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಿದ್ದಾರೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಸೇಡಿನ (ಬಿಜೆಪಿ ನಾಯಕರ ವಿರುದ್ಧ) ಇಲ್ಲ, ಏಕೆಂದರೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಜನರು ದುರಾಡಳಿತದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರಿಂದ ಸರ್ಕಾರವು ತನ್ನ ಕೆಲಸವನ್ನು ಮಾತ್ರ ಮಾಡುತ್ತಿದೆ" ಎಂದು ಅವರು ಹೇಳಿದರು.

BSY, Sriramulu, Bommai, Dr Sudhakar
ಕೋವಿಡ್​​ ಅಕ್ರಮ ಆರೋಪ: ಹಲವರ ವಿರುದ್ಧ FIR; ವಿಧಾನಸೌಧ ಪೊಲೀಸರಿಂದ ತನಿಖೆ

ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸರ್ಕಾರದ ನಡೆಯನ್ನು ಸೇಡಿನ ರಾಜಕಾರಣ ಎಂದು ಬಣ್ಣಿಸಿದ್ದಾರೆ. ಮುಡಾ ಮತ್ತು ಎಸ್‌ಟಿ ಕಾರ್ಪೊರೇಷನ್ ಹಗರಣಗಳ ತನಿಖೆಯು ಕಾಂಗ್ರೆಸ್ ಸರ್ಕಾರದ ಅಕ್ರಮ ಬಹಿರಂಗಪಡಿಸಿತು ಮತ್ತು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೀಗಾಗಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸಾಂಕ್ರಾಮಿಕ ಸಮಯದಲ್ಲಿ ವೈದ್ಯಕೀಯ ಕಿಟ್‌ಗಳ ಖರೀದಿಯಲ್ಲಿನ ಅಕ್ರಮಗಳ ಕುರಿತು ಕಾಂಗ್ರೆಸ್ ಸರ್ಕಾರವು ಎಫ್‌ಐಆರ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಆಯೋಗದ ಮಧ್ಯಂತರ ವರದಿಯ ಆಧಾರದ ಮೇಲೆ ಕ್ರಮ ಕೈಗೊಂಡಿರುವುದರಿಂದ ಇದು ಕಾನೂನು ಪರಿಶೀಲನೆಗೆ ನಿಲ್ಲುವುದಿಲ್ಲ ಎಂದು ಅವರು ಹೇಳಿದರು.

ವಿಶೇಷವಾಗಿ ಚೀನಾದಿಂದ ಮೂರು ಲಕ್ಷ ಪಿಪಿಇ ಕಿಟ್‌ಗಳ ಖರೀದಿಯ ಬಗ್ಗೆ ತನಿಖೆ ನಡೆಸಿದ ಡಿ’ಕುನ್ಹಾ ಆಯೋಗವು ಯಡಿಯೂರಪ್ಪ ಮತ್ತು ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ. ಕೋವಿಡ್ ಅಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ 167 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿ ಹೇಳಿದೆ. ಶಿವಕುಮಾರ್ ನೇತೃತ್ವದ ಏಳು ಸದಸ್ಯರ ಸಂಪುಟ ಉಪಸಮಿತಿಯ ಜೊತೆಗೆ ಎಸ್‌ಐಟಿ ರಚಿಸಲು ಸಿದ್ದರಾಮಯ್ಯ ಸಂಪುಟವು ನವೆಂಬರ್ 14 ರಂದು ನಿರ್ಧರಿಸಿತು.

ಸ್ಥಳೀಯವಾಗಿ ಪ್ರತಿ ಯೂನಿಟ್‌ಗೆ 330 ರಿಂದ 400 ರೂ.ಗೆ ಪಿಪಿಇ ಕಿಟ್‌ಗಳು ಲಭ್ಯವಿದ್ದಾಗ, ಅವುಗಳಲ್ಲಿ ಮೂರು ಲಕ್ಷ ಪಿಪಿಇ ಕಿಟ್ ಗಳನ್ನು ಪ್ರತಿ ಯೂನಿಟ್‌ಗೆ 2,117 ರೂ. ನೀಡಿ ಚೀನಾದಿಂದ ಖರೀದಿಸಲಾಗಿದೆ" ಎಂದು ಆಯೋಗದ ವರದಿಯನ್ನು ಉಲ್ಲೇಖಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ. ಡಿಸೆಂಬರ್ 7 ರಂದು ಡಾ.ಶರಣಪ್ರಕಾಶ ಪಾಟೀಲ್ ಮತ್ತು ಸಮಿತಿಯ ಇತರ ಸದಸ್ಯರೊಂದಿಗೆ ಸಭೆ ನಡೆಸಿದ ಶಿವಕುಮಾರ್, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವೈದ್ಯಕೀಯ ಕಿಟ್‌ಗಳ ಖರೀದಿಯ ಅಕ್ರಮಗಳಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದರು. ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದೂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com