ಎಚ್​ಡಿಕೆಗೆ ಮತ್ತೆ ಮುಖಭಂಗ: ಒಕ್ಕಲಿಗ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಕೆಶಿ ಬಣಕ್ಕೆ ಮೇಲುಗೈ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್​​ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದಿದ್ದಾರೆ.
DK Shivakumar-HD Kumaraswamy
ಡಿಕೆ ಶಿವಕುಮಾರ್-ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಸೋಲಿನ ನಂತರ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಮತ್ತೆ ಮುಗಭಂಗವಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಕುಮಾರಸ್ವಾಮಿ ಬಣಕ್ಕೆ ಹಿನ್ನಡೆಯಾಗಿದ್ದು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್​​ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಲ್​ ಶ್ರೀನಿವಾಸ್​​ ಮತ್ತು ಡಾ. ರೇಣುಕಾಪ್ರಸಾದ್​ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್​​ ಮತ್ತು ಖಜಾಂಚಿಯಾಗಿ ಎನ್​​.ಬಾಲಕೃಷ್ಣ ಆಯ್ಕೆ ಆಗಿದ್ದಾರೆ.

DK Shivakumar-HD Kumaraswamy
ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ತಯಾರಿಲ್ಲದ ಸರ್ಕಾರ, ಸದನದ ದಿಕ್ಕು ತಪ್ಪಿಸುವ ಕೆಲಸ: ಬಿ.ವೈ ವಿಜಯೇಂದ್ರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com