
ಬೆಳಗಾವಿ: ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ಮಸೂದೆ ಸೇರಿದಂತೆ ಒಟ್ಟು ಎಂಟು ವಿಧೇಯಕಗಳಿಗೆ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು.
ಇನ್ನೂ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
Advertisement