ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ
Updated on

ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಕಾಯ್ದೆ ತಿದ್ದುಪಡಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಹಗಲು ಹೊತ್ತು ನಿರಂತರ 12 ಗಂಟೆ ಥ್ರೀ ಫೇಸ್ ವಿದ್ಯುತ್ ಹಾಗೂ ರಾತ್ರಿ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಅಕ್ರಮ-ಸಕ್ರಮ ಹಾಗೂ ಶೀಘ್ರ ಸಂಪರ್ಕ ಯೋಜನೆಯನ್ನು ಮುಂದುವರೆಸಬೇಕು. ಭತ್ತದ ಬೆಳೆಗೆ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 5. ಸಾವಿರ ರೂ.ದರ ನೀಡಬೇಕು. ದ್ರಾಕ್ಷಿ (ಒಣ) ಬೆಳೆಗೆ ಪ್ರತಿ ಕೆಜಿಗೆ 400 ರೂ. ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಬೇಕು.

ರೈತರ ಪ್ರತಿಭಟನೆ
ಬೆಳಗಾವಿ ಅಧಿವೇಶನ ಶಾಸಕರಿಗೆ 10 ದಿನಗಳ ಪ್ರವಾಸವಷ್ಟೇ: JDS ವ್ಯಂಗ್ಯ

ರಾಜ್ಯದಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪುನಃಚೇತನಗೊಳಿಸಬೇಕು. ಮಹದಾಯಿ, ಕಳಸಾ ಬಂಡೂರಿ ಮೇಕೆದಾಟು ಯೋಜನೆ ಸೇರಿದಂತೆ ಬಾಕಿ ಉಳಿದ ನೀರಾವರಿ ಯೋಜನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿ ಜಲಾಶಯವನ್ನು ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದೆ ನೀಡಿದ್ದ ಭರವಸೆಗಳು ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ. ಹೀಗಾಗಿ ಈ ಬಾರಿ ನಾವು ಭರವಸೆಗಳಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com