NIA ಕೋರ್ಟ್ ತೀರ್ಪು: ಮೂವರು ಐಎಂ ಕಾರ್ಯಕರ್ತರು ದೋಷಿ; ಶಿಕ್ಷೆ ಪ್ರಮಾಣ ಪ್ರಕಟ ಇಂದು

ಭಟ್ಕಳದ ನಿವಾಸಿಗಳಾದ ಡಾ ಸೈಯದ್ ಇಸ್ಮಾಯಿಲ್ ಅಫಾಕ್, ಅಬ್ದುಲ್ ಸುಬೈರ್ ಮತ್ತು ಸದ್ದಾಂ ಹುಸೇನ್ ಅವರು ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಶಿಕ್ಷೆಗೊಳಗಾಗಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2015ರಲ್ಲಿ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಅವರು ಭಾರತಕ್ಕೆ ಅತಿಥಿಯಾಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಸೂಚನೆ ಮೇರೆಗೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಮೂವರು ಇಂಡಿಯನ್ ಮುಜಾಹಿದ್ದೀನ್ (IM) ಕಾರ್ಯಕರ್ತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರಕರಣಗಳ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

ಭಟ್ಕಳದ ನಿವಾಸಿಗಳಾದ ಡಾ ಸೈಯದ್ ಇಸ್ಮಾಯಿಲ್ ಅಫಾಕ್, ಅಬ್ದುಲ್ ಸುಬೈರ್ ಮತ್ತು ಸದ್ದಾಂ ಹುಸೇನ್ ಅವರು ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಶಿಕ್ಷೆಗೊಳಗಾಗಿದ್ದಾರೆ. ಅಫಾಕ್ ಪಾಕಿಸ್ತಾನದ ಕರಾಚಿಯ ಅರ್ಸಾಲಾ ಎಂಬಾಕೆಯನ್ನು ವಿವಾಹವಾಗಿದ್ದನು.

ಈ ಕುರಿತು 2015ರಲ್ಲಿ ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಕೇಂದ್ರ ಅಪರಾಧ ವಿಭಾಗದ ಎಸಿಪಿ ತಮ್ಮಯ್ಯ ಎಂ.ಕೆ ಅವರು ಅಂದಿನ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಎಂ.ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಎಸ್ಪಿಪಿ ಶಂಕರ ಬಿಕ್ಕಣ್ಣನವರ್ ಪ್ರಾಸಿಕ್ಯೂಷನ್ ನೇತೃತ್ವ ವಹಿಸಿದ್ದರು. ಇಂದು ಶಿಕ್ಷೆಯ ಪ್ರಮಾಣ ಪ್ರಕಟ ನ್ಯಾಯಾಧೀಶ ಗಂಗಾಧರ ಸಿ.ಎಂ ಸೋಮವಾರ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಶಿಕ್ಷೆಯ ಪ್ರಮಾಣ ಪ್ರಕಟಣೆ ದಿನಾಂಕವನ್ನು ಇಂದಿಗೆ ಮುಂದೂಡಿದ್ದರು.

ಭಟ್ಕಳದ ರಿಯಾಜ್ ಅಹಮದ್ ಸಯೀದಿ ಮತ್ತು ಜೈನುಲ್ಲಾಬುದ್ದೀನ್ ಅವರನ್ನು ಖುಲಾಸೆಗೊಳಿಸಲಾಗಿದೆ. ಇತರ ಆರೋಪಿಗಳಾದ ರಿಯಾಜ್ ಭಟ್ಕಳ್, ಇಕ್ಬಾಲ್ ಭಟ್ಕಳ್, ಅಲಿಫ್ ಮತ್ತು ಸಮೀರ್ ತಲೆಮರೆಸಿಕೊಂಡಿದ್ದಾರೆ. ಪ್ರಾಸಿಕ್ಯೂಷನ್ ಪ್ರಕಾರ, ಪೊಲೀಸ್ ತಂಡವು ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಮಾಹಿತಿ ಸಂಗ್ರಹಿಸಿದಾಗ ಸ್ಫೋಟಕಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿದುಬಂದಿದ್ದು, 2015ರ ಜನವರಿ 7 ರಂದು ರಾತ್ರಿ ಭಟ್ಕಳದಿಂದ ಬೆಂಗಳೂರಿಗೆ ಬಂದ ಶಂಕಿತ ಡಾ.ಅಫಾಕ್ ಫ್ರೇಜರ್ ಟೌನ್‌ಗೆ ಆಗಮಿಸಿದರೆ, ಸದ್ದಾಂ ಹುಸೇನ್ ನ್ನು ಭಟ್ಕಳದಲ್ಲಿ ಬಂಧಿಸಲಾಯಿತು.

ತರುವಾಯ, ‘ದಾರುಲ್ ಖೈರಾ’ ಎಂಬ ಮನೆಯನ್ನು ಶೋಧಿಸಲಾಯಿತು. ಡಿಟೋನೇಟರ್‌ಗಳು, ಜಿಲಾಟಿನ್ ಸ್ಟಿಕ್‌ಗಳು, ಪೈಪ್ ಬಾಂಬ್‌ಗಳು, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಟೈಮರ್‌ಗಳು, ಗನ್‌ಪೌಡರ್ ಮತ್ತು ಬಾಂಬ್‌ಗಳಲ್ಲಿ ಬಳಸಲಾದ ಇತರ ವಸ್ತುಗಳು ಮತ್ತು ಯುಎಇಯ ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Representational image
Praveen Nettaru ಹತ್ಯೆ ಪ್ರಕರಣ: ಆರೋಪಿ ರಿಯಾಜ್ ಬಂಧನ ಬೆನ್ನಲ್ಲೇ 16 ಸ್ಥಳಗಳಲ್ಲಿ NIA ದಾಳಿ, ತೀವ್ರ ಶೋಧ

ಡಾ. ಅಫಾಕ್ ಅವರ ಮನೆಯಿಂದ ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವ ಶಂಕಿತ ರಿಯಾಝ್ ಅಹಮದ್ ಸಯೀದಿ ದೇಶ ಬಿಡಲು ಹೊರಟಿದ್ದಾಗ ಮಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿತ್ತು. ನಾಲ್ವರು ಶಂಕಿತರು ಕೆಲವು ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ಅಫಾಕ್ ತನ್ನ ಅತ್ತೆಯನ್ನು ಭೇಟಿ ಮಾಡುವ ನೆಪದಲ್ಲಿ ಪದೇ ಪದೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದನು ಮತ್ತು ಅಲಿಫ್ ಮತ್ತು ರಿಯಾಜ್ ಭಟ್ಕಳ್ ಅವರನ್ನು ಭೇಟಿಯಾಗುತ್ತಾನೆ ಮತ್ತು ಜಿಹಾದಿ ಚಟುವಟಿಕೆಗಳನ್ನು ಯೋಜಿಸಿದ್ದನು. ಪಾಕಿಸ್ತಾನದ ಐಎಸ್‌ಐನಿಂದ ಬಾಂಬ್ ತಯಾರಿಕೆಯಲ್ಲಿ ತರಬೇತಿ ಪಡೆದಿದ್ದ. ಡಾ ಅಫಾಕ್ ಏರ್ ಅರೇಬಿಯಾ ಟಿಕೆಟ್‌ಗಳನ್ನು ರಾವಲ್ಪಿಂಡಿಯ (ಐಎಸ್‌ಐ ಪ್ರಧಾನ ಕಚೇರಿ) ಐಪಿ ವಿಳಾಸದಿಂದ ಬುಕ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com