
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಪವಿತ್ರಾ ಗೌಡ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ನಟಿಯ ಮಾಜಿ ಪತಿ ಸಂಜಯ್ ಸಿಂಗ್ ಪ್ರತಿಕ್ರಿಯಿಸಿ, ಪವಿತ್ರಾಗೆ ಜಾಮೀನು ಸಿಕ್ಕಿರೋದು ಖುಷಿ ಆಗುತ್ತಿದೆ ಎಂದು ಮಾತನಾಡಿದ್ದಾರೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿರುವುದಕ್ಕೆ ಸಂಜಯ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ಮಾಜಿ ಪತ್ನಿ ಸಲುವಾಗಿ ತಾವು ಹರಕೆ ಹೊತ್ತಿರುವುದಾಗಿ ತಿಳಿಸಿದ್ದಾರೆ.
ಪವಿತ್ರಾಗೆ ಜಾಮೀನು ಸಿಕ್ಕಿರೋದು ಖುಷಿ ಆಗುತ್ತಿದೆ. ಆ ದೇವರು ನನ್ನ ಮಾತು ಕೇಳಿದರು. ಈ ಕೇಸ್ ಮುಗಿದು ಹೋದರೆ ಸಾಕು ಅನಿಸುತ್ತಿದೆ. ಯಾರು ತಪ್ಪು ಮಾಡಿದ್ದಾರೆ. ಅವರಿಗೆ ಶಿಕ್ಷೆ ಸಿಗಲಿ. ನಾನು ಮೊದಲಿಂದಲೂ ಹೇಳ್ತಿದ್ದೆ ಈಗಲೂ ಹೇಳ್ತಿದ್ದೀನಿ, ಪವಿತ್ರಾ ಇನೋಸೆಂಟ್ ಆಕೆ ತಪ್ಪು ಮಾಡಿಲ್ಲ. ಆಕೆ ಬಹಳ ಮಹತ್ವಾಕಾಂಕ್ಷೆ ಇರುವವಳು ಎಂದಿದ್ದಾರೆ. ಪವಿತ್ರಾಗೆ ಜಾಮೀನು ಸಿಕ್ಕಿರೋದು ಮೊದಲು ಗೊತ್ತಿರಲಿಲ್ಲ. ಈಗ ನಾನು ಬೆಂಗಳೂರಿಗೆ ಟ್ರಿಪ್‌ಗೆ ಬಂದಿದ್ದೆ, ನನ್ನ ವೈಯಕ್ತಿಕ ಕೆಲಸ ಇತ್ತು ಹಾಗಾಗಿ ಬಂದಿದ್ದೇನೆ. ಅವರಿಗೆ ಬೇಲ್ ಸಿಕ್ಕ ವಿಚಾರ ನನ್ನ ಸ್ನೇಹಿತರೊಬ್ಬರು ತಿಳಿಸಿದರು. ಈ 6 ತಿಂಗಳ ಹಿಂದೆ ಒಂದ್ಸಲ ನಮ್ಮ ಮಾವನಿಗೆ ಫೋನ್ ಮಾಡಿದ್ದೆ, ಪವಿತ್ರಾ ಬಗ್ಗೆ ವಿಚಾರಿಸಿದೆ. ಈಗಲೂ ಪವಿತ್ರಾಗಾಗಿ ಕಾಯುತ್ತಿದ್ದೇನೆ. ಮುಂದೆಯೂ ಕಾಯುತ್ತೇನೆ ಎಂದು ಮಾಜಿ ಪತಿ ಸಂಜಯ್ ಸಿಂಗ್ ಮಾತನಾಡಿದ್ದಾರೆ.
ಮಾಜಿ ಪತಿ ಎಂಬ ಶಬ್ದಿ ಬಿಡಿ. ಪತಿ ಅಲ್ವಾ.. ಹಾಗಾಗಿ ಪವಿತ್ರಾ ಗೌಡಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷ ಆಗುತ್ತದೆ. ಹೇಗಾದರೂ ಅವರು ಹೊರಗೆ ಬರಲಿ ಅಂತ ನಾನು ಪ್ರತಿ ದಿನ ದೇವರಲ್ಲಿ ಬೇಡಿಕೊಳ್ಳುತ್ತಿದ್ದೆ. ಪವಿತ್ರಾ ಗೌಡ ಈ ಕೇಸ್ನಿಂದ ಶಾಶ್ವತವಾಗಿ ಹೊರಗೆ ಬರಲಿ ಅಂತ ಹರಕೆ ಹೊತ್ತುಕೊಂಡಿದ್ದೇನೆ’ ಎಂದಿದ್ದಾರೆ.
Advertisement