ಚಿಕ್ಕಮಗಳೂರು: ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ, ಕಾರ್ಯಕರ್ತರು ಪೊಲೀಸ್ ವಶಕ್ಕೆ!

ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್‌ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು ಬೆಂಬಲಿಗರು ರವಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI
Updated on

ಚಿಕ್ಕಮಗಳೂರು: ಬಿಜೆಪಿ ಎಂಎಲ್ ಸಿ ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನ ಹನುಮತ್ತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಬೆಂಬಲಿಗರು ಹಾಗೂ ಸ್ಥಳೀಯ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧನವನ್ನು ಖಂಡಿಸಿ ಕೇಸರಿ ಪಕ್ಷದ ಪದಾಧಿಕಾರಿಗಳು ಬೆಳಗಾವಿ, ಕಲಬುರಗಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯ ವಿಧಾನ ಪರಿಷತ್ತಿನಲ್ಲಿ ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರವಿ ಅವರನ್ನು ಬಂಧಿಸಲಾಗಿತ್ತು. ಪೊಲೀಸರ ನಡೆಯನ್ನು ಖಂಡಿಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಸದಸ್ಯ ರವಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್‌ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು ಬೆಂಬಲಿಗರು ರವಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com