ಸತ್ಯಕ್ಕೆ ಜಯ ಸಿಕ್ಕಿದೆ; ನನ್ನ ಮೇಲೆ ದೈಹಿಕವಾಗಿ ಹಲ್ಲೆ, ರಾತ್ರಿಯಿಡೀ 'ಟೆರರಿಸ್ಟ್' ರೀತಿ ಕಿರುಕುಳ: ಸಿಟಿ ರವಿ ಆರೋಪ

ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ.
CT Ravi
ಸಿಟಿ ರವಿ
Updated on

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಈ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಿ.ಟಿ. ರವಿ ನನ್ನಗೆ ಹೈಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ನಿನ್ನೆ ಅನುಭವಿಸಿದ ಸಂಕಷ್ಟವನ್ನು 35 ವರ್ಷಗಳ ಹಿಂದೆಯೇ ಅನುಭವಿಸಿದ್ದೆ. ಇದೆಲ್ಲಾ ಹೊಸತಲ್ಲಾ. ಇಂತಹ ಸಂಕಷ್ಟದ ಸಂದರ್ಭದಲ್ಲಿ ನನ್ನ ಪರ ನಿಂತ ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಇದಕ್ಕೂ ಮುನ್ನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ. ನನ್ನನ್ನು ರಾತ್ರಿಯಿಡಿ ಟೆರರಿಸ್ಟ್ ರೀತಿ ನೋಡಿದ್ರು. ನಾನು ಖಾನಾಪುರದಲ್ಲಿ ದೂರು ಕೊಟ್ಟರೂ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಳ್ಳಲಿಲ್ಲ. ನಾನು ಸಭಾಪತಿಗಳಿಗೂ ದೂರು ನೀಡಿದ್ದೆ. ಸದನದಲ್ಲಿ ಏನೇ ಆದರೂ ಸಭಾಪತಿಗಳು ನೋಡಿಕೊಳ್ಳುತ್ತಾರೆ. ಆದರೆ ಸುಳ್ಳು ಕೇಸ್ ಹಾಕಿಸಿ ನನ್ನನ್ನು ಬಂಧಿಸಿದ್ದಾರೆ. ಆದರೆ ನನ್ನ ವಿರುದ್ದ ಸಾಕ್ಷ್ಯಾದಾರ ಇಲ್ಲದಿದ್ದರೂ ನನ್ನ ವಿರುದ್ದ ಎಫ್ ಐಆರ್ ಹಾಕಿದ್ದಾರೆ. ನಿನ್ನೆ ಇಡೀ ರಾತ್ರಿ ಸುತ್ತಾಡಿಸುವ ಮೂಲಕ ಮಾನಸಿಕವಾಗಿ ಟಾರ್ಚರ್ ನೀಡಿದ್ದಾರೆ ಎಂದು ಆರೋಪಿಸಿದರು.

ನಾನು ರಾಜಕೀಯ ಸೈದ್ದಾಂತಿಕವಾಗಿ ಟೀಕೆ ಮಾಡುತ್ತೇನೆ. ವೈಯಕ್ತಿಕವಾಗಿ ನಾನು ಟೀಕೆ ಮಾಡಲ್ಲ ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳಿದುಕೊಳ್ಳಿ. ಡಿಕೆ ಶಿವಕುಮಾರ್ ಬಗ್ಗೆ ರಾಮನಗರದಲ್ಲಿ ಕೇಳಿ ತಿಳಿದುಕೊಳ್ಳಿ. ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬೆಳಗಾವಿಯಲ್ಲಿ ಕೇಳಿ ತಿಳಿದುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

CT Ravi
ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ MLC ಸಿ.ಟಿ ರವಿಗೆ ಬಿಗ್ ರಿಲೀಫ್; ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ

ಈ ಮಧ್ಯೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಸರ್ಕಾರವನ್ನು ಟೀಕಿಸಿದ್ದರಿಂದ ಸಿ.ಟಿ. ರವಿ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಇದು ಬೆಚ್ಚಿ ಬೀಳಿಸುವ ಘಟನೆಯಾಗಿದ್ದು, ಮುಂದೆ ಹೋರಾಟ ಮಾಡುತ್ತೇವೆ. ಪೊಲೀಸ್ ಕಮಿಷನರ್, ಅಧಿಕಾರಿಗಳ ವಿರುದ್ಧ ದೂರು ನೀಡುತ್ತೇವೆ. ನಮ್ಮದು ಅಬ್ಬೇಪಾರಿ ಪಕ್ಷ ಅಲ್ಲ ಎಂದು ಗುಡುಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com