
ಬೆಂಗಳೂರು: ಪ್ರೇಯಸಿಯರನ್ನು ಅದಲು ಬದಲು ಮಾಡಿಕೊಳ್ಳುವ ದೊಡ್ಡ ಜಾಲವೊಂದನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದು, ಯುವತಿ ಮೇಲೆ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಪತ್ನಿಯ ವಿನಿಮಯ ಹಗರಣ ವ್ಯಾಪಕ ಸುದ್ದಿ ಮಾಡಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದ್ದು, ಈ ಬಾರಿ ಪ್ರೇಯಸಿಯನ್ನು ವಿನಿಮಯಕ್ಕೆ ಯತ್ನಿಸಿ ಇಬ್ಬರು ಆರೋಪಿಗಳು ಜೈಲುಪಾಲಾಗಿದ್ದಾರೆ.
ಹೌದು.. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹರೀಶ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಪರಸ್ಪರ ತಮ್ಮ ತಮ್ಮ ಪ್ರೇಯಸಿಯರನ್ನು ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಸಹಕರಿಸದಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ತನ್ನ ಪ್ರಿಯಕರ ಬೇರೆ ಪುರುಷನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ಕರಾಳ ದಂಧೆ ನಡೆಸುತ್ತಿದ್ದ ಕಾಮುಕರನ್ನು ಬಂಧಿಸಿದ್ದಾರೆ.
ಪ್ರೇಯಸಿಯರ ವಿನಿಮಯ
ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ತನಿಖೆಗೊಳಪಡಿಸಿದಾಗ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಖಾಸಗಿ ಪಾರ್ಟಿಗಳ ಹೆಸರಿನಲ್ಲಿ ಹರೀಶ್ ಮತ್ತು ಹೇಮಂತ್ ಈ ಪ್ರೇಮಿಗಳ ವಿನಿಮಯ ಆಟ ನಡೆಸುತ್ತಿರುವುದು ಪತ್ತೆಯಾಗಿದೆ. ಪೊಲೀಸರಿಗೆ ದೂರು ನೀಡಿರುವ ಯುವತಿ ತಾನು ಇಬ್ಬರಲ್ಲಿ ಒಬ್ಬನ ಪ್ರೇಮಿ ಎಂಬುದನ್ನು ಬಹಿರಂಗಪಡಿಸಿದ್ದಾಳೆ. ಆರೋಪಿಗಳು ಮಹಿಳೆಯರನ್ನು ಬಲವಂತವಾಗಿ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸುತ್ತಿರುವುದು ಕಂಡು ಬಂದಿದೆ.
ಗರ್ಲ್ ಫ್ರೆಂಡ್ ಸ್ವಾಪಿಂಗ್ ವಾಟ್ಸಪ್ ಗ್ರೂಪ್
ಇನ್ನು ಆರೋಪಿಗಳು ಪ್ರೇಯಸಿಯರ ವಿನಮಯಕ್ಕಾಗಿ ಪ್ರತ್ಯೇಕ ವಾಟ್ಸಪ್ ಗ್ರೂಪ್ ಅನ್ನು ಕೂಡ ಮಾಡಿಕೊಂಡಿದ್ದರು. ಇದರಲ್ಲಿ ಪರಿಚಯಸ್ಥರನ್ನು ಸೇರಿಸಿಕೊಂಡು ಅವರನ್ನೂ ತಮ್ಮ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಖಾಸಗಿ ಪಾರ್ಟಿಗಳನ್ನು ಆಯೋಜಿಸಲು ವಾಟ್ಸಾಪ್ ಗ್ರೂಪ್‌ಗಳನ್ನು ರಚಿಸಿಕೊಂಡಿದ್ದರು ಎನ್ನಲಾಗಿದೆ.
ಈ ಇಬ್ಬರು ಆರೋಪಿಗಳು ತಮ್ಮ ಪರಿಚಯಸ್ಥರೊಂದಿಗೆ ಲೈಂಗಿಕ ಸಂಬಂಧ ಹೊಂದಲು ಮತ್ತು ಅವರೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಒತ್ತಾಯಿಸಿದರು ಎಂದು ಸಂತ್ರಸ್ತೆ ಪೊಲೀಸರ ಮುಂದೆ ಬಹಿರಂಗಪಡಿಸಿದ್ದಾರೆ. ಆದರೆ ಆಕೆ ಆರಂಭದಲ್ಲಿ ನಿರಾಕರಿಸಿದಾಗ, ಅವರು ತಮ್ಮ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡರು ಎಂದು ಆರೋಪಿಸಿದ್ದಾರೆ.
ಬಳಿಕ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಇಂತಹ ಕೃತ್ಯಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ವಿಂಗರ್ಸ್ ವಾಟ್ಸ್ ಗ್ರೂಪ್
ವಾಟ್ಸ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ನಗರದ ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಬದಲಾವಣೆ ಮಾಡಿಕೊಳ್ಳುತ್ತಿದ್ದರು ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನ ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಮಾಡಿದ್ದಾನೆ.
ಒಪ್ಪದಿದ್ದರೆ ಬ್ಲಾಕ್ ಮೇಲ್
ಇಬ್ಬರೂ ಆರೋಪಿಗಳು ಯುವತಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಪರಸ್ಪರ ಲೈಂಗಿಕ ಕ್ರಿಯೆಗೆ ಅವರು ನಿರಾಕರಿಸಿದಾಗ ಅವರು ಇತರರೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದ ಅವರು ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಇದಲ್ಲದೆ, ಆರೋಪಿಗಳು ಸಂತ್ರಸ್ತರಿಗೆ ಬ್ಲಾಕ್ ಮೇಲ್ ಮಾಡಲು ಹಲವು ಮಹಿಳೆಯರ ಫೋಟೋಗಳು ಮತ್ತು ವೀಡಿಯೊಗಳನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋಗಳು ಪತ್ತೆ
ಘಟನೆಯಿಂದ ಬೇಸತ್ತ ಯುವತಿ ದೂರು ಆಧರಿಸಿ ಬಂಧಿತ ಆರೋಪಿಗಳ ಮೊಬೈಲ್ ಪರಿಶೀಲನೆ ವೇಳೆ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್? ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
Advertisement