ಬೆಂಗಳೂರು ಮಹಾನಗರದಲ್ಲಿ ಹೊಸವರ್ಷಕ್ಕೆ ಸಿದ್ಧತೆ: ಈ ಬಾರಿಯ ನಿಯಮಗಳೇನು?

ಬೆಂಗಳೂರಿನ ಹೊಸ ವರ್ಷಾಚರಣೆ ಸಂಭ್ರಮ ನಡೆಯುವುದು ಸಾಮಾನ್ಯವಾಗಿ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಕಮರ್ಷಿಯಲ್ ಸ್ಟ್ರೀಟ್, ಇಂದಿರಾನಗರಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ.
Representational image
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಮಹಾನಗರಿ ಬೆಂಗಳೂರಿನಲ್ಲಿ ಹೊಸವರ್ಷ ಬರಮಾಡಿಕೊಳ್ಳಲು ಸಿದ್ಧತೆಗಳು ನಡೆಯುತ್ತಿವೆ. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಯೋಜನೆ ರೂಪಿಸುತ್ತಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.

ಬೆಂಗಳೂರಿನ ಹೊಸ ವರ್ಷಾಚರಣೆ ಸಂಭ್ರಮ ನಡೆಯುವುದು ಸಾಮಾನ್ಯವಾಗಿ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಕಮರ್ಷಿಯಲ್ ಸ್ಟ್ರೀಟ್, ಇಂದಿರಾನಗರಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ.

Representational image
ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಎಂಜಿ ರಸ್ತೆಗೆ ಹರಿದುಬಂದ ಜನಸಾಗರ- ವಿಡಿಯೋ

ಹೊಸ ವರ್ಷಾಚರಣೆಗೆ ನಿಯಮಗಳು

  • ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು

  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ

  • ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್​ಗಳು ಬಂದ್

  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ

  • ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

  • ಆಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ

  • ಬಾರ್, ಪಬ್​ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್​ಗೆ ಸೂಚನೆ

  • ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ

  • ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com