
ಬೆಂಗಳೂರು: ತನ್ನ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದು ಹೇಳಿರುವ ಬಿಜೆಪಿ ಎಂ ಎಲ್ಸಿ ಸಿ ಟಿ ರವಿ, ಬೆಳಗಾವಿ ಪೊಲೀಸರು ತನ್ನನ್ನು ಬಂಧಿಸಿದ ನಂತರದ ಬೆಳವಣಿಗೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಹೇಳಿಕೆ ನೀಡಿದ ಆರೋಪದ ಮೇಲೆ ರವಿ ಅವರನ್ನು ಗುರುವಾರ ಸಂಜೆ ಪೊಲೀಸರು ಬಂಧಿಸಿದ್ದರು.
ಈಗಲೂ ನಾನು ನನ್ನ ಜೀವಕ್ಕೆ ಬೆದರಿಕೆಯನ್ನು ಎದುರಿಸುತ್ತಿದ್ದೇನೆ. ನನಗೆ ಭದ್ರತೆಯನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಏನಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ನಿನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಗುರುವಾರ ರಾತ್ರಿ ತಮ್ಮ ಮೇಲೆ ಹಲ್ಲೆ ನಡೆಸಿ ನಂತರ ಪೊಲೀಸರು ಪ್ರತ್ಯೇಕ ಸ್ಥಳಗಳು, ಕಬ್ಬಿನ ಗದ್ದೆಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದಾರೆ ಆರೋಪಿಸಿದರು.
ಬೆಳಗಾವಿ ಪೊಲೀಸ್ ಕಮಿಷನರ್, ಬೆಳಗಾವಿ ಗ್ರಾಮಾಂತರ ಎಸ್ಪಿ ಮತ್ತು ಪೊಲೀಸರ ನಡತೆ ಅನುಮಾನಾಸ್ಪದವಾಗಿದೆ ಎಂದು ಹೇಳಿದರು. ಸಂಪೂರ್ಣ ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ಮತ್ತು ಖಾಸಗಿ ಫೋನ್‌ಗಳ ಕರೆ ದಾಖಲೆಗಳನ್ನು ಪರಿಶೀಲಿಸಬೇಕಾಗಿದೆ. ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದವರು ಯಾರು... ಸಿಎಂ, ಡಿಸಿಎಂ, ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಹಿರಿಯ ಅಧಿಕಾರಿಗಳೆ ಎಂದು ಪ್ರಶ್ನಿಸಿದ್ದು, ತಮ್ಮ ಫೋನ್ ಟ್ಯಾಪ್ ಆಗುತ್ತಿದೆ ಎಂದರು.
ಸಿ ಟಿ ರವಿ ಅವರ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಲಕ್ಷ್ಮಿ ವಿರುದ್ಧ ಅಶ್ಲೀಲ ಹೇಳಿಕೆಗಳನ್ನು ಬಳಸಿರುವ ರವಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಒತ್ತಾಯಿಸಿದ್ದಾರೆ.
Advertisement