
ಕಲಬುರಗಿ: ಕಲಬುರಗಿ ನಗರದಲ್ಲಿ ಸೋಮವಾರ ವಿದ್ಯುತ್ ತಂತಿ ತುಂಡಾಗಿ 34 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಜೆಸ್ಕಾಂ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಕೈ, ಕಾಲು ಮತ್ತು ಹೊಟ್ಟೆಗೆ ತೀವ್ರ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸಂತ್ರಸ್ತೆಯ ಕುಟುಂಬದವರ ದೂರಿನ ಮೇರೆಗೆ ನಾವು GESCOM(ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ಮತ್ತು ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸೋಮವಾರ, ಬೌದ್ಧಿಕ ವಿಕಲಾಂಗ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಮಹಿಳೆ ಗಾಯಗೊಂಡಿದ್ದರು.
14 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಹಳೆ ಜೇವರ್ಗಿ ಕ್ರಾಸ್ ಬಳಿ ಮಕ್ಕಳನ್ನು ಕರೆದುಕೊಂಡು ಬರಲು ನಿಂತಿದ್ದಾಗ ತಂತಿ ತುಂಡಾಗಿ ವಾಹನದ ಮೇಲೆ ಬಿದ್ದಿದೆ.
Advertisement