Former PM Manmohan Singh Passes Away: ರಾಜ್ಯದಲ್ಲಿ 7 ದಿನ ಶೋಕಾಚರಣೆ, ಡಿ.27 ರಂದು ಸರ್ಕಾರಿ ಶಾಲೆಗಳಿಗೆ ರಜೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.
Manmohan Singh- vidhanasoudha
ಮನಮೋಹನ್ ಸಿಂಗ್- ವಿಧಾನಸೌಧonline desk
Updated on

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ರಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ತಿಳಿದುಬಂದಿದೆ.

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com