2025 ಹೊಸ ವರ್ಷಾಚರಣೆ: Namma Metro ಸೇವೆ ಅವಧಿ ವಿಸ್ತರಣೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(ಬಿಎಂಆರ್ಸಿಎಲ್) 2025ರ ಹೊಸ ವರ್ಷದ ಅಂಗವಾಗಿ ಮೆಟ್ರೋ ರೈಲು ಸೇವಾವಧಿಯನ್ನು ವಿಸ್ತರಿಸಿದ್ದು, ಮಧ್ಯರಾತ್ರಿ 2.40ರವರೆಗೂ ರೈಲು ಸೇವೆ ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ.
Bengaluru metro trains to run for extended hours
ನಮ್ಮ ಮೆಟ್ರೋ ರೈಲು ಮತ್ತು ಹೊಸ ವರ್ಷಾಚರಣೆ
Updated on

ಬೆಂಗಳೂರು: 2025 ಹೊಸ ವರ್ಷಾಚರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಸಿಹಿ ಸುದ್ದಿ ನೀಡಿದ್ದು, Namma Metro ರೈಲು ಸೇವೆ ಅವಧಿ ವಿಸ್ತರಣೆ ಮಾಡಿದೆ.

ಹೌದು.. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(ಬಿಎಂಆರ್ಸಿಎಲ್) 2025ರ ಹೊಸ ವರ್ಷದ ಅಂಗವಾಗಿ ಮೆಟ್ರೋ ರೈಲು ಸೇವಾವಧಿಯನ್ನು ವಿಸ್ತರಿಸಿದ್ದು, ಮಧ್ಯರಾತ್ರಿ 2.40ರವರೆಗೂ ರೈಲು ಸೇವೆ ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ.

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜ.1 ರಂದು ಮುಂಜಾನೆ 2 ಗಂಟೆಗೆ ಎಲ್ಲ ಟರ್ಮಿನಲ್‍ನ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ(ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

Bengaluru metro trains to run for extended hours
ಮುನ್ನೋಟ 2025: ಹೊಸ ವರ್ಷ ಜಾಗತಿಕ ವಿತ್ತ ಜಗತ್ತಿನ ಮುಂದೆ ಹೊತ್ತು ತರಲಿದೆ ಸವಾಲು ಮತ್ತು ಅವಕಾಶ! (ಹಣಕ್ಲಾಸು)

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1 ಅಂದರೆ ಮುಂಜಾನೆ 2 ಗಂಟೆಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ರೈಲು ಕಾರ್ಯನಿರ್ವಹಿಸುತ್ತವೆ. ಆದರೆ ಎಂ.ಜಿ.ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‍ನಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಲಾಗಿದೆ.

ರಾತ್ರಿ 11ರ ನಂತರ ರಿಟರ್ನ್ ಜರ್ನಿ ಪೇಪರ್ ಟಿಕೇಟ್‍

ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ರೂ. ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೇಟ್‍ ಅನ್ನು ಬಳಸಲು ಶೂಚಿಸಲಾಗಿದೆ. ಈ ಕಾಗದ ಟಿಕೇಟ್‍ ಅನ್ನು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಡಿಸೆಂಬರ್ 31ರ ಬೆಳಗ್ಗೆ 8 ಗಂಟೆಯಿಂದ ಮುಂಗಡವಾಗಿ ಖರೀದಿಸಬಹುದಾಗಿದೆ.

ಅಂತೆಯೇ ಸಾಮಾನ್ಯ ಕ್ಯೂಆರ್ ಕೋಡ್ ಟಿಕೆಟ್ ಮತ್ತು ಕಾರ್ಡ್‍ಗಳಿಂದ ಈ ನಿಲ್ದಾಣಗಳಿಂದ ಪ್ರಯಾಣಿಸಲು ಮಾನ್ಯವಾಗಿರುತ್ತವೆ. ವೈಟ್‍ಫೀಲ್ಡ್ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ಕಡೆಗೆ ಹೋಗುವವರು ಪ್ರಯಾಣಕ್ಕಾಗಿ ಟ್ರಿನಿಟಿ ಮೆಟ್ರೋ ನಿಲ್ದಾಣವನ್ನು ಬಳಸಬಹುದು. ಚಲ್ಲಘಟ್ಟ ಹಾಗೂ ಮಾದಾವರ ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com