ಬೆಂಗಳೂರು: ಬಿನ್ನಿಮಿಲ್ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

ಬುಧವಾರ ರಾತ್ರಿ ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ (ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್‌ನಿಂದ 3 ಕಿ.ಮೀ) ಇಬ್ಬರೂ ಯುವಕರು ಹಳಿ ದಾಟುತ್ತಿದ್ದರು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ಬೆಂಗಳೂರು: ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಬುಧವಾರ ರಾತ್ರಿ ನಡೆದಿದೆ.

ಮಡತರನ್ನು ಕೇತನ್ ಮಣಿಕಂಠನ್ (23 ವರ್ಷ), ಶರತ್ ಕಣ್ಣನ್ ರವಿ (27) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ (ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್‌ನಿಂದ 3 ಕಿ.ಮೀ) ಇಬ್ಬರೂ ಯುವಕರು ಹಳಿ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ರೈಲ್ವೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇತನ್ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೆ, ಶರತ್ ಫ್ಲಿಪ್‌ಕಾರ್ಟ್‌ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಪ್ರಾತಿನಿಧಿಕ ಚಿತ್ರ
ಹಾವೇರಿಯಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು

ಹಳಿ ಮೇಲೆ ಯುವಕರು ವಾಕಿಂಗ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ರಾತ್ರಿ 9.20ರ ಸುಮಾರಿಗೆ ನನಗೆ ಮಾಹಿತಿ ಬಂದಿತ್ತು. ಯಾವ ರೈಲು ಡಿಕ್ಕಿ ಹೊಡೆದಿದೆ ಎಂಬುದು ತಿಳಿದುಬಂದಿಲ್ಲ ಗೇಟ್ ಮ್ಯಾನ್ ಹೇಳಿದ್ದಾರೆ.

ಅಸ್ವಾಭಾವಿಕ ಸಾವಿನ ಕುರಿತು ಬಿಎನ್‌ಎಸ್‌ನ ಸೆಕ್ಷನ್ 194 ರ ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳಉ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com