ಕಂದಕಕ್ಕೆ ಉರುಳಿ ಬಿದ್ದ ಆಲ್ಟೋ ಕಾರು
ರಾಜ್ಯ
ಪುತ್ತೂರು: ಕಂದಕಕ್ಕೆ ಉರುಳಿ ಬಿದ್ದ ಕಾರು; ತಂದೆ-ಮಗ ಸೇರಿ ಮೂವರ ಸಾವು
ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ದುರ್ದೈವಿಗಳನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ