
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಹಾಗೂ ಅಪಾಯಕಾರಿ ರೋಗ ಹರಡುವಿಕೆ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.
ತಮ್ಮ ವಿರೋಧಿಗಳನ್ನುHIV- Aids ಪೀಡಿತರ ಮೂಲಕ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ chargesheet ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್ ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2481 ಪುಟಗಳ ಚಾರ್ಜ್ಶೀಟ್ ಅನ್ನು ಎಸ್ಐಟಿ ತಂಡ ಸಲ್ಲಿಕೆ ಮಾಡಿದೆ. ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜವೆಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ. ಶಾಸಕ ಮುನಿರತ್ನ ಮಾತ್ರವಲ್ಲದೆ ಸುಧಾಕರ್, ಶ್ರೀನಿವಾಸ್, ಇನ್ಸ್‌ಪೆಕ್ಟರ್ ಐಯ್ಯಣ್ಣರೆಡ್ಡಿ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಸೆಪ್ಟೆಂಬರ್ 18ರಂದು 7 ಜನರ ವಿರುದ್ದ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಿ ಈ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ
ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ.
ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್ 30ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಸದ್ಯ ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್ಐಟಿ ಕಾಯುತ್ತಿದೆ.
Advertisement