ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಂತ್ರಸ್ತನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಿಸಿದ ಸಚಿವ ಈಶ್ವರ ಖಂಡ್ರೆ

ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ
ಅರಣ್ಯ ಸಚಿವ ಈಶ್ವರ್ ಖಂಡ್ರೆ
Updated on

ಬೀದರ್: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ನಿವಾಸಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು.ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು, ಖಂಡ್ರೆ ಸಾಂತ್ವನ ಹೇಳಿ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ನ್ಯಾಯದ ಪರವಾಗಿದೆ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ. ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದರು. ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಅಲ್ಲದೆ, ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ನನಗೆ ದೂರು ನೀಡಿದ ಕುಟುಂಬ ಸದಸ್ಯರೊಂದಿಗೆ ನಾನು ಮಾತನಾಡಿದ್ದೇನೆ. ನಾನು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕೆಲವು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತನಿಖೆ ನಡೆಸುತ್ತಿದ್ದಾರೆ ಮತ್ತು ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸುವ ಬಗ್ಗೆಯೂ ಸರ್ಕಾರ ಪರಿಗಣಿಸಲಿದೆ ಎಂದು ಹೇಳಿದರು.

ತಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ದುಃಖದಲ್ಲಿರುವ ಕುಟುಂಬಸ್ಥರಿಗೆ ಧೈರ್ಯ, ಸಾಂತ್ವನ ಹೇಳುವ ಅಗತ್ಯವಿದೆ. ನಾವು ಅವರೊಂದಿಗೆ ಇದ್ದೇವೆ ಎಂದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ
ಕಾಂಗ್ರೆಸ್ ಪಾಪದ ಕೊಡ ತುಂಬಿದೆ; ಪ್ರಿಯಾಂಕ್ ಖರ್ಗೆಯಿಂದ ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಪೊಲೀಸರ ವಿರುದ್ಧ ಆಕ್ರೋಶ

ಮೃತ ಗುತ್ತಿಗೆದಾರ ಸಚಿನ್ ಮನೆಗೆ ಈಶ್ವರ ಖಂಡ್ರೆ ಭೇಟಿ ನೀಡಿದಾಗ ಅವರ ಜೊತೆಯಲ್ಲಿದ್ದ ಪೊಲೀಸರ ವಿರುದ್ಧ ಸಚಿನ್ ಅವರ ಸಹೋದರಿಯರು ತೀವ್ರ ಆಕ್ರೋಶ ಹೊರಹಾಕಿದರು. ಸಚಿನ್‌ ಕಾಣೆಯಾಗಿರುವ ಬಗ್ಗೆ ದೂರು ಕೊಡಲು ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ. ದೂರು ಸ್ವೀಕರಿಸಿದ್ದರೆ, ಈ ಅನಾಹುತವನ್ನು ತಡೆಯಬಹುದಿತ್ತು. ಸಚಿನ್ ಸಾವಿಗೆ ಪೊಲೀಸರೇ ಕಾರಣ. ಈಗೇಕೆ ಪೊಲೀಸರು ಮನೆಗೆ ಬಂದಿದ್ದಾರೆ. ಅವರನ್ನು ಹೊರಗೆ ಕಳುಹಿಸಿ ಎಂದು ಸಚಿವರ ಸಮ್ಮುಖದಲ್ಲೇ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್‌ಪಿ ಜೆಎಸ್ ನ್ಯಾಮೆಗೌಡ ಸೇರಿದಂತೆ ಇತರ ಪೊಲೀಸರು ಮನೆಯಿಂದ ಹೊರನಡೆದರು.

26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ್ ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೆ ಸಚಿವ ಪ್ರಿಯಾಂಕ್ ಖಗ್ರೆ ಅವರ ಆಪ್ತ ರಾಜು ಕಪನೂರ ಸೇರಿದಂತೆ ಇತರೆ 8 ಮಂದಿ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದರು. ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಚಿನ್ ಪಾಂಚಾಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗುತ್ತಿಗೆ ಪಡೆದಿದ್ದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ
ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ 1 ಕೋಟಿ ರೂ ಹಣಕ್ಕಾಗಿ ಬೇಡಿಕೆ, ಕೊಲೆ ಬೆದರಿಕೆ: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com