ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತಿಬ್ಬರು ಮಾಲಾಧಾರಿಗಳು ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ

ಕಳೆದ ಏಳು ದಿನಗಳಿಂದ ಕಿಮ್ಸ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಶನಿವಾರ ಮಧ್ಯರಾತ್ರಿ ​ಕೊನೆಯುಸಿರೆಳೆದಿದ್ದಾರೆ.
Shankar Chawhan and Manjunath Vagmode
ಶಂಕರ್ ಚವ್ಹಾಣ್, ಮಂಜುನಾಥ ವಾಗ್ಮೋಡೆ
Updated on: 

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ ಮತ್ತು ಮಂಜುನಾಥ ವಾಗ್ಮೋಡೆ ಮೃತ ಅಯ್ಯಪ್ಪ ಮಾಲಾಧಾರಿಗಳಾಗಿದ್ದು, ಈ ಮೂಲಕ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್​ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.

ಕಳೆದ ಏಳು ದಿನಗಳಿಂದ ಕಿಮ್ಸ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಶನಿವಾರ ಮಧ್ಯರಾತ್ರಿ ​ಕೊನೆಯುಸಿರೆಳೆದಿದ್ದಾರೆ.

ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಆರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29), ಮೃತ ದುರ್ದೈವಿಗಳಾಗಿದ್ದು, 6ನೇ ಅಯ್ಯಪ್ಪ ಭಕ್ತ ಮಂಜುನಾಥ ವಾಗ್ಮೋಡೆ ಮೃತಪಟ್ಟಿದ್ದಾರೆ.

ಇನ್ನೂ ಮೂವರು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com