
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಚಿಕ್ಕಬಳ್ಳಾಪುರ ಬಳಿ ಇರುವ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 7 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ನಂದಿ ಗಿರಿಧಾಮದಲ್ಲಿ ನ್ಯೂಇಯರ್ ಸೆಲೆಬ್ರೇಷನ್‌ಗೆ ನಿರ್ಬಂಧ ಹೇರಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿದ್ದಾರೆ.
ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಇತರ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
Advertisement