ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ: ಜಿ. ಪರಮೇಶ್ವರ

ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
Home Minister Dr. G. Parameshwar
ಗೃಹ ಸಚಿವ ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ತನಿಖೆಯ ವರದಿ ಬಂದ ನಂತರ ಏನು‌ ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು

ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದರು.

Home Minister Dr. G. Parameshwar
ಬೀದರ್ ಗುತ್ತಿಗೆದಾರ ಸಚಿನ್ ಪಂಚಾಲ್ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com