ಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ: ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು

ಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ ಕಲ್ಪಿಸಲು ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಎಚ್​ಕೆ ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಸಚಿವ ಎಚ್.ಕೆ.ಪಾಟೀಲ್
ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು: ಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ ಕಲ್ಪಿಸಲು ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಎಚ್​ಕೆ ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಚ್​ಕೆ ಪಾಟೀಲ್ ಅವರು​, ವಿವಾಹ ನೋಂದಣಿ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೊಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ಸೂಚಿಸಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮೊದಲು ವಿವಾಹ ನೋಂದಣಿ ಆಗುತ್ತಿದ್ದವು. ಈಗ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶವಿದೆ. ಗ್ರಾಮ 1, ಕಾವೇರಿ 2, ಬಾಪೂಜಿ ಸೇವಾಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ನು ಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ಮತ್ತು ಅಸ್ತಿತ್ವದಲ್ಲಿರುವ 82 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ
ಮಹಾನಗರ ಪಾಲಿಕೆಗಳಲ್ಲಿ 10 ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 24 ಸೇರಿದಂತೆ ಒಟ್ಟು 34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ 36 ಕೋಟಿ ರೂ. ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.

ಜಲ ಸಂಪನ್ಮೂಲ ಇಲಾಖೆಯ ಅಡಿ ಬೆಳಗಾವಿಯ ಹುಚ್ಚಗಾಂವ್, ಬಸ್ತವಾಡಿಯ 20 ಕೆರೆಗಳನ್ನು ತುಂಬಿಸುವ 250 ಕೋಟಿ ರೂ. ವೆಚ್ಚದ ಯೋಜನೆ ಮತ್ತು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ 61 ಕೆರೆ ತುಂಬಿಸುವ 519 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಲಾಗಿದೆ. ಘಟಪ್ರಭಾ ನದಿಯಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com