ಹಳೆ ವೈಷಮ್ಯ: ಎರಡು ಗುಂಪುಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ!

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಉಂಟಾದ ಜಗಳವೊಂದು ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಉಂಟಾದ ಜಗಳವೊಂದು ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಯ್ಯಪ್ಪ ನಗರದ ನಿವಾಸಿ ದರ್ಶನ್ (41) ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹಗಲು ಕನಸಿನ ಕೆರೆ ಸಮೀಪದ ದೀಪಾ ಆಸ್ಪತ್ರೆ ಮುಂಭಾಗ ದರ್ಶನ್ ಹಾಗೂ ಆರೋಪಿಗಳ ನಡುವೆ ಜಗಳವಾಗಿದೆ.

ದರ್ಶನ್ ಮೇಲೆ ಆರೋಪಿಗಳಾದ ರಾಘವೇಂದ್ರ, ಮದುಸೂಧನ್, ನರೇಶ್ ಮತ್ತು ತ್ಯಾಗರಾಜ್ ಎಂಬುವರು ಮರದ ಹಲಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ದರ್ಶನ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗರುವಾರ ಮುಂಜಾನೆ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ. ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com